

ಪಡುಬಿದ್ರಿ: ಶಾಂತಿವನ ಟ್ರಸ್ಟ್ ಧರ್ಮಸ್ಥಳ ವತಿಯಿಂದ ರಾಜ್ಯಮಟ್ಟದ ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ರಾವ್ ಹಾಗೂ ಇನ್ನಂಜೆ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಪ್ರೌಢಶಾಲೆ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿ ಪ್ರಣತಿ ರಾವ್ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ಪಡುಬಿದ್ರಿ ಗಣಪತಿ ಪ್ರೌಢಶಾಲೆ ವಿದ್ಯಾರ್ಥಿನಿ ಮನ್ವಿತಾ ತೃತೀಯ ಸ್ಥಾನ ಗಳಿಸಿದ್ದಾರೆ. ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು ಧರ್ಮಸ್ಥಳದಲ್ಲಿ ಮಂಗಳವಾರ ಪುರಸ್ಕಾರ ಸಮಾರಂಭದಲ್ಲಿ ಡಿ.ವೀರೇಂದ್ರ ಹೆಗ್ಗಡೆ, ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ರಾಮಕೃಷ್ಣ ಮಠ, ಸಂಗೀತ ನಿರ್ದೇಶಕ ವಿ.ಮನೋಹರ್ ಸಮ್ಮುಖದಲ್ಲಿ ಪುರಸ್ಕಾರ ಪಡೆದರು.