ಪ್ರಬಂಧ, ಚರ್ಚಾ ಸ್ಪರ್ಧಾ ವಿಜೇತರಿಗೆ ಬಹುಮಾನ

uni
ಪ್ರಬಂಧ, ಚರ್ಚಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ನಿರ್ದೇಶಕಿ ಸಾವಿತ್ರಿ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ ಮೊದಲಾದವರು ಹಾಜರಿದ್ದರು.
Published on

ಮಂಗಳೂರು: ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮತ್ತು ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ಬಲ್ಮಠ ವತಿಯಿಂದ ತ್ತೀಚೆಗೆ ಆಯೋಜಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯತು. ಚರ್ಚಾ ಸ್ಪರ್ಧೆಯಲ್ಲಿ ವಿಷಯದ ಪರ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ಶಾರದಾ ಸತೀಶ್ ಕಂಕಣವಾಡಿ ಪ್ರಥಮ ಹಾಗೂ ವಿರೋಧವಾಗಿ ಶಕ್ತಿ ಪದವಿಪೂರ್ವ ಕಾಲೇಜಿನ ನಿಧಿ ದೇಸಾಯಿ ಪ್ರಥಮ ಸ್ಥಾನ ಪಡೆದರು. ಪ್ರಬಂಧ ಸ್ಪರ್ಧೆಯಲ್ಲಿ ವಿಠ್ಠಲ ಜೇಸಿಸ್ ಆಂಗ್ಲಮಾಧ್ಯಮ ಶಾಲೆಯ ಮಹಿಮಾ ಆರ್. ಪ್ರಥಮ ಹಾಗೂ ಬ್ರೈಟ್ ಮಾಡೆಲ್ ಆಂಗ್ಲಮಾಧ್ಯಮ ಶಾಲೆಯ ಹನೀಫಾ ಲಿಫಾಮ್ ಹಾಗೂ ಆಯೆಶಾ ತೃತೀಯ ಸ್ಥಾನ ಪಡೆದರು.

ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ನಿರ್ದೇಶಕಿ ಸಾವಿತ್ರಿ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ.ಹಿರೇಮಠ, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಉಪನ್ಯಾಸಕಿ ಬಿಂದು ಬಿ.ನಾಯರ್, ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ವನಿತಾ ದೇವಾಡಿಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net