ವಿವಿಧ ಸ್ಪರ್ಧೆಯಲ್ಲಿ ಬಹುಮಾನ

h27-nulvi
Published on

ಹುಬ್ಬಳ್ಳಿ: ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ನಿಮಿತ್ತ ಏರ್ಪಡಿಸಿದ್ದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ತಾಲೂಕಿನ ನೂಲ್ವಿ ಗ್ರಾಮದ ಶ್ರೀ ಗಂಗಾಧರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ.
ಭಾಷಣ ಸ್ಪರ್ಧೆಯಲ್ಲಿ ಅನುಷಾ ಜೀವನಗೌಡ್ರ (ಪ್ರಥಮ), ರಸಪ್ರಶ್ನೆ ಸ್ಪರ್ಧೆಯಲ್ಲಿ ಲೋಕೇಶ್ವರಿ ಜಡಿಮಠ (ದ್ವಿತೀಯ), ಪ್ರಬಂಧ ಸ್ಪರ್ಧೆಯಲ್ಲಿ ಪ್ರಗತಿ ಛಬ್ಬಿ (ದ್ವಿತೀಯ), ಭರತನಾಟ್ಯದಲ್ಲಿ ವೈಷ್ಣವಿ ರಜಪೂತ ಬಹುಮಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net