ಜನಪರ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ

27 Ylb 03
ಯಲಬುರ್ಗಾದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಗೆ ಸನ್ಮಾನಿಸಲಾಯಿತು. ಶಾಸಕ ಬಸವರಾಜ ರಾಯರಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ವೀರನಗೌಡ ಬಳೂಟಗಿ, ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು, ಮಹೇಶ ಹಳ್ಳಿ, ಕೆರಿಬಸಪ್ಪ ನಿಡಗುಂದಿ ಇದ್ದರು.
Published on

ಯಲಬುರ್ಗಾ: ರಾಜ್ಯ ಕಾಂಗ್ರೆಸ್ ಸರ್ಕಾರ ಉತ್ತಮ ಜನಪರ ಆಡಳಿತ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ವಾಸ್ತವ ಸ್ಥಿತಿ ಅರಿಯುವ ಕೆಲಸ ಮಾಡಲಾಗುತ್ತಿದೆ. ಕೊಪ್ಪಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು.

ಸರ್ಕಾರ ಅಧಿಕಾರಕ್ಕೆ ಬಂದ ಮೂರ್ನಾಲ್ಕು ತಿಂಗಳಲ್ಲಿ ಕಲ್ಯಾಣ ಕೆಲಸ ಮಾಡುತ್ತಿರುವುದು ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ಜನತಾದರ್ಶನದಿಂದ ಜನಸಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಸರ್ಕಾರದಿಂದ ನಡೆದಿದೆ ಎಂದರು.

ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ಮುಂದಿನ ತಿಂಗಳಲ್ಲಿ ಯಲಬುರ್ಗಾದಲ್ಲಿ ಜಿಲ್ಲಾಮಟ್ಟದ ಜನತಾದರ್ಶನ ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ಆಯೋಜಿಸಲಾಗುವುದು. ಇದರಿಂದ ಕ್ಷೇತ್ರದ ಜನಸಾಮಾನ್ಯರ ಸಮಸ್ಯೆಗಳು ಬಗಹರಿಯಲಿವೆ.

ಯಲಬುರ್ಗಾಕ್ಕೆ ಒಂದು ಮುರಾರ್ಜಿ ವಸತಿ ಶಾಲೆ ಮಂಜೂರು ಮಾಡುವಂತೆ ಸಚಿವ ತಂಗಡಗಿಗೆ ಬೇಡಿಕೆ ಇಟ್ಟಿದ್ದೇನೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ವೀರನಗೌಡ ಬಳೂಟಗಿ, ಯಂಕಣ್ಣ ಯರಾಶಿ, ಹನುಮಂತಗೌಡ ಚಂಡೂರು,

ಮಹೇಶ ಹಳ್ಳಿ, ಕರಿಬಸಪ್ಪ ನಿಡಗುಂದಿ, ಬಿ.ಎಂ.ಶಿರೂರು, ಅಶೋಕ ತೋಟದ, ಈರಪ್ಪ ಕುಡಗುಂಟಿ, ಬಸವರಾಜ ಚಿತ್ತರಗಿ, ಮಹಾಂತೇಶ ಗಾಣಿಗೇರ, ಖಾಸಿಂಸಾಬ್ ತಳಕಲ್, ಶರಣಪ್ಪ ಗಾಂಜಿ, ಶಿವನಗೌಡ ದಾನರಡ್ಡಿ, ಗಿರಿಜಾ ಸಂಗಟಿ, ಶರಣಗೌಡ ಬಸಾಪುರ, ನಿಂಗಪ್ಪ ಕಮತರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net