

ವಿಜಯವಾಣಿ ಸುದ್ದಿಜಾಲ ಧಾರವಾಡ
ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಸರ್ಕಾರದ ವೈಫಲ್ಯ ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಬಂಽಸಿ ಬಿಡುಗಡೆ ಮಾಡಲಾಯಿತು.
ನಗರದ ವಿವೇಕಾನಂದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತರು, ಜ್ಯುಬಿಲಿ ವೃತ್ತದಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸಿದರು.
ವಕ್ ಕಾಯ್ದೆಯ ವಿರೋಧದ ಹೆಸರಲ್ಲಿ ಬಂಗಾಳದಲ್ಲಿ ಹಿಂದುಗಳಿಗೆ ಕಿರುಕುಳ ನೀಡಲಾಗಿದೆ. ಮುರ್ಶಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ಸರ್ಕಾರದ ವಿರುದ್ಧ ಮಾತ್ರವಲ್ಲದೆ, ಹಿಂದುಗಳ ಮೇಲೆ ನೇರವಾಗಿ ಹಿಂಸಾಚಾರ ನಡೆಸಲಾಗಿದೆ. ಜಿಹಾದಿ ಗುಂಪು 200ಕ್ಕೂ ಹೆಚ್ಚು ಹಿಂದುಗಳ ಮನೆ ಹಾಗೂ ಅಂಗಡಿಗಳನ್ನು ಸುಟ್ಟು ಹಾಕಿದೆ. ಆದ್ದರಿಂದ ಪಶ್ಚಿಮ ಬಂಗಾಳದಲ್ಲಿ ರಾಷ್ಟçಪತಿ ಆಡಳಿತ ಜಾರಿ ಮಾಡಬೇಕು. ಹಿಂಸಾ ಪ್ರಕರಣವನ್ನು ಎನ್‌ಐಎ ಮೂಲಕ ತನಿಖೆ ನಡೆಸಬೇಕು. ಕೇಂದ್ರ ಭದ್ರತಾ ಪಡೆಗಳಿಗೆ ಕಾನೂನು ಮತ್ತು ಸುವ್ಯವಸ್ಥೆಯ ಜವಾಬ್ದಾರಿ ವಹಿಸಬೇಕು. ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ರೋಹಿಂಗ್ಯಾಗಳನ್ನು ಗುರುತಿಸಿ ಹೊರದಬ್ಬಬೇಕು ಎಂದು ಒತ್ತಾಯಿಸಿ ರಾಷ್ಟçಪತಿಗೆ ಮನವಿ ರವಾನಿಸಿದರು.
ಜ್ಯುಬಿಲಿ ವೃತ್ತದಲ್ಲಿ ರಸ್ತೆ ತಡೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಂಽಸಿ ಬಿಡುಗಡೆಗೊಳಿಸಿದರು. ಹಿಂದುಪರ ಸಂಘಟನೆಗಳ ಶಿವಾನಂದ ಸತ್ತಿಗೇರಿ, ಅನುದೀಪ ಕುಲಕರ್ಣಿ, ಸಿದ್ದು ಹಿರೇಮಠ, ಮಂಜುನಾಥ ಮಕ್ಕಳಗೇರಿ, ರಾಕೇಶ ನಾಝರೆ, ಪ್ರಮೋದ ಕಾರಕೂನ, ಶಂಕರ ಶೆಳಕೆ, ಇತರರು ಪಾಲ್ಗೊಂಡಿದ್ದರು.