

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಪಾಲ ಎಸ್.ಎಮ್.ಕೃಷ್ಣ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕಾಲೇಜು ಅಧ್ಯಾಪಕರ ಸಂಘದ ಕಾರ್ಯದರ್ಶಿ ಗಳಾದ ಡಾ.ಮಹೇಶ ಗಂವ್ಹಾರ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡುವಲ್ಲಿ ಅವರ ಪಾತ್ರ ಹಿರಿದಾದದ್ದು,ಇಂತಹ ದೂರದೃಷ್ಟಿಯ ನಾಯಕನನ್ನು ಮತ್ತು ಓರ್ವ ರಾಜಕೀಯ ಮುತ್ಸದ್ದಿಯನ್ನು ಕಳೆದುಕೊಂಡಿರುವುದು ನಾಡಿಗೆ ತುಂಬಲಾರದ ನಷ್ಟವೆಂದು ಕಂಬನಿ ಮಿಡಿದಿದ್ದಾರೆ