ಕಾಂಗ್ರೆಸ್​ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಕ್​ ಪರ ಘೋಷಣೆ; 'ಮೋದಿ ಹಮಾರಾ ಕುತ್ತಾ' ಎಂದ ಕಾರ್ಯಕರ್ತ

telangana congress
Published on

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಪ್ರಿಯಾಂಕ ಜಾರಕಿಹೊಳಿ ಗೆಲುವಿನ ನಗೆ ಬೀರಿದ್ದು, ಪುತ್ರಿಯನ್ನು ಗೆಲ್ಲಿಸಿಕೊಂಡು ಬರುವಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಪ್ರಿಯಾಂಕ ಗೆಲುವಿನ ಬೆನ್ನಲ್ಲೇ ಚಿಕ್ಕೋಡಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರ ಸಂಭ್ರಮಾಚರಣೆ ಮಗಿಲುಮುಟ್ಟಿದ್ದು, ಈ ವೇಳೆ ಕಿಡಗೇಡಿಯೋರ್ವ ಪಾಕ್​ ಪರ ಘೋಷಣೆ ಕೂಗಿದ್ದಾನೆ.

 ಚಿಕ್ಕೋಡಿಯ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ಜಮೀರ್ ನಾಯಕವಾಡಿ (26) ಎಂಬಾತ ಪಾಕ್​ ಪರ ಘೋಷಣೆ ಕೂಗಿರುವುದಾಗಿ ತಿಳಿದು ಬಂದಿದೆ. ಪಾಕಿಸ್ತಾನ್‌ಕ್ಕೆ, ಪ್ರಿಯಾಂಕಾ ಜಾರಕಿಹೊಳಿಗೆ ಜಿಂದಾಬಾದ್‌ ಎಂದು ಕೂಗಿದ್ದಾನೆ. ಅಲ್ಲದೇ ಕಾರ್ಯಕರ್ತನೋರ್ವ ಕಾಂಗ್ರೆಸ್ ಬಾವುಟ ಹಿಡಿದು ಘೋಷಣೆ ಕೂಗುತ್ತಿದ್ದ ವೇಳೆ ಪ್ರಧಾನಿ ಮೋದಿಗೆ ಅವಾಚ್ಯವಾಗಿ ನಿಂದನೆ ಮಾಡಿದ್ದಾನೆ. 'ಮೋದಿ ಹಮಾರಾ ಕುತ್ತಾ' ಎಂದು ಹೇಳಿದ್ದಾನೆ. ಕೂಡಲೇ ಎಚ್ಚೆತ್ತ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Zameer

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘೋಷಣೆ ಕೂಗಿದ ಬಳಿಕ ಆರೋಪಿ ಚಿಕ್ಖೋಡಿಯಿಂದ ಬೆಳಗಾವಿಗೆ ಬಂದಿದ್ದಾನೆ. ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಆತನನ್ನು ಬೆಳಗಾವಿ ಬಸ್​ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ ರಾಜ್ಯಸಭಾ ಚುನಾವಣೆ ಫಲಿತಾಂಶ ಹೊರಬಿದ್ದಾಗ ವಿಧಾನಸೌಧದಲ್ಲೇ ಕಾಂಗ್ರೆಸ್‌ ನೂತನ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಜೈಕಾರ ಕೂಗಿದ್ದರು. ಇದಕ್ಕೆ ರಾಜ್ಯಾದ್ಯಂತ ಭಾರಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಕ್​ ಪರ ಘೋಷಣೆ ಮೊಳಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net