ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಪರ ಕಾರ್ಯಕ್ರಮ

gan (12)
Published on

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ, ರುದ್ರಭೂಮಿ ನಿರ್ಮಾಣಕ್ಕೆ ಅನುದಾನ ಸಹಿತ ಅನೇಕ ಕಾರ್ಯಕ್ರಮಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಅನುದಾನ ನೀಡಲಾಗುತ್ತಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಯೋಜನಾಧಿಕಾರಿ ಸಂಜಯ ನಾಯ್ಕ ಹೇಳಿದರು.

ಗಂಗೊಳ್ಳಿ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1.5 ಲಕ್ಷ ರೂ. ಅನುದಾನದ ಮಂಜೂರಾತಿ ಪತ್ರವನ್ನು ಶುಕ್ರವಾರ ಹಸ್ತಾಂತರಿಸಿ ಮಾತನಾಡಿದರು.

ದೇವಸ್ಥಾನದ ಅಧ್ಯಕ್ಷ ರಾಮಪ್ಪ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ, ಸದಸ್ಯ ಬಿ.ರಾಘವೇಂದ್ರ ಪೈ, ಭಜನಾ ಪರಿಷತ್ ಸಂಯೋಜಕ ಕೃಷ್ಣ ಪೂಜಾರಿ, ಕೇಂದ್ರ ಸಮಿತಿ ನಿಕಟಪೂರ್ವ ಅಧ್ಯಕ್ಷ ನಾರಾಯಣ ಕೆ.ಗುಜ್ಜಾಡಿ, ವಲಯ ಮೇಲ್ವಿಚಾರಕ ಚಂದ್ರ ಮರಾಠಿ, ಶೌರ್ಯ ವಿಪತ್ತು ಘಟಕದ ಮಡಿ ನಾಗರಾಜ ಖಾರ್ವಿ, ದೇವಸ್ಥಾನದ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ರಾಘವೇಂದ್ರ ಖಾರ್ವಿ, ಜನಾರ್ದನ ಖಾರ್ವಿ, ಮಂಜುನಾಥ ಖಾರ್ವಿ, ರಾಘವೇಂದ್ರ ಖಾರ್ವಿ, ಸತೀಶ್ ಖಾರ್ವಿ, ದೇವರಾಯ ಪಟೇಲ್, ನಾಗಪ್ಪಯ್ಯ ಪಟೇಲ್, ಒಕ್ಕೂಟದ ಅಧ್ಯಕ್ಷರು, ಸೇವಾ ಪ್ರತಿನಿಧಿಗಳು, ಶೌರ್ಯ ವಿಪತ್ತು ಘಟಕದ ಸದಸ್ಯರು, ದೇವಸ್ಥಾನದ ಸಮಿತಿ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಉಷಾಕುಮಾರಿ ಸ್ವಾಗತಿಸಿದರು. ಸಹಶಿಕ್ಷಕಿಯರಾದ ಅನುಷಾ ಸಿ.ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ಶಾಂತಿ ವಂದಿಸಿದರು.

ಪೋಟೋ ಪೈಲ್ ನೇಮ್ : 20ಜಿಎಎನ್2

ಗಂಗೊಳ್ಳಿ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1.5 ಲಕ್ಷ ರೂ. ಅನುದಾನದ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net