ಪಂಚ ಗ್ಯಾರಂಟಿ ಚುನಾವಣೆಗೆ ರೂಪಿಸಿದ ಯೋಜನೆಯಲ್ಲ, ಬಡವರ ಪರವಾದ ಯೋಜನೆ ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

CM Siddaramayya
Published on

ಲೋಕಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೆ ತಕ್ಕಷ್ಟು ಸ್ಥಾನಗಳು ದೊರೆತ್ತಿಲ್ಲ. ಆದರೆ, ನಾವು ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ. ಮೈಸೂರಿನಲ್ಲಿ ನಮಗೆ ಹಿನ್ನಡೆಯಾಗಿರುವುದು ನಿಜ. ಆದರೆ, ಮೈಸೂರು ಜಿಲ್ಲೆಯನ್ನು ಒಳಗೊಂಡಿರುವ ಚಾಮರಾಜನಗರ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಿದ್ದೇವೆ. ಕಾಂಗ್ರೆಸ್‌ನ ಶೇಕಡವಾರು ಮತ ಗಳಿಕೆಯೂ ಹೆಚ್ಚಾಗಿದ್ದು, ಕಳೆದ ಬಾರಿಗಿಂತ ಶೇ.13 ರಷ್ಟು ಹೆಚ್ಚು ಮತ ಪಡೆದಿದ್ದೇವೆ ಎಂದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಚುನಾವಣೆಗೋಸ್ಕರ ರೂಪಿಸಿದ ಯೋಜನೆಯಲ್ಲ. ಅದು ಬಡವರ ಪರವಾದ ಯೋಜನೆಯಾಗಿದೆ. ಈ ಯೋಜನೆಗಳು ಬಡವರಿಗೆ ಆರ್ಥಿಕ ಹಾಗೂ ಸಾಮಾಜಿಕವಾಗಿ ಶಕ್ತಿ ತುಂಬಿಸುತ್ತಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದರು.

ಮುಂಗಾರು ದುರ್ಬಲಗೊಂಡಿದ್ದು, ಈ ಕುರಿತು ತಜ್ಞರೊಂದಿಗೆ ಚರ್ಚಿಸಿ ಮುಂದೆ ಏನು ಮಾಡಬೇಕು ಎಂಬ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಮೋಡ ಬಿತ್ತನೆ ವಿಚಾರವಾಗಿ ಹೇಳಿಕೆ ನೀಡಲು ನಾನು ತಜ್ಞನಲ್ಲ. ಹಾಗಾಗಿ ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ 7ನೇ ವೇತನ ಆಯೋಗದ ಅನುಷ್ಠಾನದ ಕುರಿತು ಕೇಳಲಾದ ಪ್ರಶ್ನೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net