ಶೋಷಿತರ ಸಮಸ್ಯೆ, ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ದಸಂಸ

16cbp1
Published on

ಚಿಕ್ಕಬಳ್ಳಾಪುರ: ನೆಮ್ಮದಿಯ ಬದುಕಿಗಾಗಿ ತುಂಡು ಭೂಮಿ, ನತೆ ಬುದಕಿಗಾಗಿ ಒಂದು ಸೂರು ಎಂಬ ಘೋಷ ವಾಕ್ಯದೊಂದಿಗೆ ಜಿಲ್ಲೆಯಲ್ಲಿನ ತಾಲೂಕು ಕಚೇರಿಗಳ ಆವರಣದಲ್ಲಿ ಜ.20 ರಿಂದ ಅರ್ನಿದಿಷ್ಟಾವಧಿ ಧರಣಿಯನ್ನು ದಸಂಸ ಕೈಗೊಂಡಿದೆ. ಜಿಲ್ಲೆಯಲ್ಲಿ ದಲಿತರಿಗೆ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ, ದಲಿತರ ಮೇಲಿನ ದೌರ್ಜನ್ಯವನ್ನು ತಡೆಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಲವಾಗಿದೆ. ಬಡ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತ ಅನುಸರಿಸುತ್ತಿದ್ದು ಉಳ್ಳವರ ಪರ ರ್ನಿಣಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದಸಂಸ ರಾಜ್ಯ ಸಂಚಾಲಕ ಕೆ.ಸಿ.ರಾಜಾಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. .

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗುತ್ತಿರುವುದರ ನಡುವೆ ಪೊಲೀಸ್ ಠಾಣೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಅಸಡ್ಡೆ ಧೋರಣೆಯನ್ನು ತೋರಲಾಗುತ್ತಿದೆ. ಶೋಷಿತರ ಪರ ಧ್ವನಿ ಎತ್ತಿ ನ್ಯಾಯ ಒದಗಿಸುವ ಕೆಲಸವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಕದಿರೇನಹಳ್ಳಿಯಲ್ಲಿ ವಸತಿ ರಹಿತರಿಗೆ ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ಹಾಗೆಯೇ ಗುಡಿಬಂಡೆ ತಾಲೂಕಿನ ಕಡೇಹಳ್ಳಿಯಲ್ಲಿ ರಸ್ತೆ ವಿಸ್ತರಣೆಗೆ ಮನೆಗೆ ಕಳೆದುಕೊಂಡವರಿಗೆ 2021 ರಲ್ಲಿ 3 ಎಕರೆ ಜಮೀನು ಗುರುತಿಸಲಾಗಿದೆ. ಆದರೆ, ಇದುವರೆಗೂ ಲಾನುಭವಿಗಳಿಗೆ ಮನೆಯನ್ನು ನಿರ್ಮಿಸಿಕೊಡಲು ಸಾಧ್ಯವಾಗಿಲ್ಲ. ನಿರಂತರ ಹೋರಾಟಗಳಿಗೆ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. .

ಜಿಲ್ಲಾ ಸಂಚಾಲಕ ಸಿ.ಜಿ.ಗಂಗಪ್ಪ ಮಾತನಾಡಿ, ದಲಿತ ಕುಂದು ಕೊರತೆಗಳ ನಿವಾರಣೆಯಲ್ಲಿ ಆಡಳಿತ ಯಂತ್ರಾAಗ ವೈಲ್ಯ ಹೊಂದಿದ್ದು ಜಿಲ್ಲೆಯ ತಾಲೂಕು ಕಚೇರಿಗಳ ಮುಂಭಾಗ ಅರ್ನಿದಿಷ್ಟಾವಧಿ ಹೋರಾಟ ನಡೆಸಲಾಗುತ್ತಿದೆ. ಇದೇ ವೇಳೆ ಮನವಿ ಪತ್ರ ಸಲ್ಲಿಕೆಗಿಂತಲೂ ಬೇಡಿಕೆ ಈಡೇರುವವರೆಗೂ ಹಿಂದೆ ಸರಿಯದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

*ಜನಪ್ರತಿನಿಧಿಗಳಿಗೂ ಮುತ್ತಿಗೆ

ಸಾಗುವಳಿ ಚೀಟಿ ವಿತರಣೆ, ವಸತಿ ಸೌಲಭ್ಯ ಕಲ್ಪಿಸುವುದು, ಎಸ್ಸಿಪಿ/ಟಿಎಸ್ಪಿ ಯೋಜನೆಯ ಹಣ ದುರ್ಬಳಕೆಯ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೋರಾಟದ ಮೂಲಕ ಜನಪ್ರತಿನಿಧಿಗಳನ್ನು ಎಚ್ಚರಿಸುತ್ತಿದ್ದು ಆದರೂ ಸ್ಪಂದಿಸದಿದ್ದಲ್ಲಿ ಹೋರಾಟ ಮತ್ತು ಮುತ್ತಿಗೆಯ ಬಿಸಿ ಮುಟ್ಟಿಸಲಾಗುತ್ತದೆ ಎಂದು ದಸಂಸ ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net