ಕುಡಿವ ನೀರಿನ ಸಮಸ್ಯೆ ಪರಿಹರಿಸಿ

13.ktal.01
Published on

ಕವಿತಾಳ: ಹಿರೇಹಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಪಂಗೆ ಮುತ್ತಿಗೆ ಹಾಕಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಎರಡು ತಿಂಗಳಿಂದ ಕುಡಿವ ನೀರಿನ ಸಮಸ್ಯೆಯಿದ್ದು, ಈ ಬಗ್ಗೆ ಗ್ರಾಪಂ ಮತ್ತು ತಾಪಂಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ. ಪಿಡಿಒ ಕಚೇರಿಗೆ ಸರಿಯಾಗಿ ಬರುತ್ತಿಲ್ಲ. ಇದರಿಂದಾಗಿ ಸಮಸ್ಯೆಯನ್ನು ಯಾರಿಗೆ ಹೇಳಬೇಕು ಎನ್ನುವುದು ತಿಳಿಯದಂತಾಗಿದೆ. ಗ್ರಾಮದಲ್ಲಿ ಮೂರು ಕೊಳವೆಬಾವಿಗಳು ಇದ್ದೂ ಇಲ್ಲದಂತಾಗಿದೆ. ಅಂಬೇಡ್ಕರ್ ಕಾಲನಿಯಲ್ಲಿ ಕೊಳವೆಬಾವಿ ಕೊರೆಯಿಸಬೇಕೆಂದು ಆಗ್ರಹಿಸಿದರು. ಪಿಡಿಒ ಸೈಯದ್ ಶಾಹಿದ್ ಮಾತನಾಡಿ, ಹೊಸ ಪೈಪ್‌ಲೈನ್ ಅಳವಡಿಸಿ ನೀರು ಪೂರೈಸಲಾಗುವುದು ಎಂದು ತಿಳಿಸಿದರು. ಮರಿಯಮ್ಮ, ದುರುಗಮ್ಮ, ಅಕ್ಕಮ್ಮ, ಮಂಜುನಾಥ, ಯಮನೂರಪ್ಪ, ಅಮರಪ್ಪ, ಹುಲುಗಪ್ಪ, ಮೊನಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net