

ಲೋಕಾಪುರ: ಪಟ್ಟಣದಲ್ಲಿ ಲೋಕಾಪುರ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ನೇತೃತ್ವದಲ್ಲಿ ನಡೆಯಿತು.ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ಮಾತನಾಡಿ, ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ಗಳನ್ನು ನಡೆಸುತ್ತಿದೆ. ಹಣ ಪಾವತಿಯಾಗದಿರುವ ಹಾಗೂ ಪಿಂಚಣಿಗೆ ಸಂಬಂಧಿಸಿದ ಇತರ ದೂರುಗಳಿದ್ದಲ್ಲಿ ಸದರಿ ಅದಾಲತ್ ಹಾಜರಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.
ಸಾಮಾಜಿಕ ಭದ್ರತಾ ಯೋಜನೆಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಾ ಯೋಜನೆ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಮೈತ್ರಿ ಯೋಜನೆ ಹಾಗೂ ಮನಸ್ವಿನಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪಿಂಚಣಿ ಅದಾಲತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಂದಾಯ ನಿರೀಕ ಸತೀಶ ಬೇವೂರ, ಗ್ರಾಮ ಆಡಳಿತ ಅಧಿಕಾರಿಗಳಾದ ಪ್ರಕಾಶ ಶೇರಖಾನೆ, ಗಿರೀಶ ಹಡಪದ, ಸಂತೋಷ ಚಾಂದಗಾರ, ಬಸವರಾಜ ಮಠಪತಿ, ರಾಜು ಪೂಜಾರಿ, ಕಂದಾಯ ಇಲಾಖೆ ಸಿಬ್ಬಂದಿ ರೇಷ್ಮಾ ಜಮಾದಾರ ಇದ್ದರು.
ಲೋಕಾಪುರ ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮ ಜರುಗಿತು.