ಟೋಲ್ ಕೇಂದ್ರ ನಿರ್ಮಾಣದಿಂದ ಸಮಸ್ಯೆ

toll
ಕಂಚಿನಡ್ಕ ಟೋಲ್ ನಿರ್ಮಾಣ ವಿರೋಧಿಸಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಲಾಯಿತು
Published on

ಪಡುಬಿದ್ರಿ: ಸರ್ಕಾರ ಒಮ್ಮೆ ನಿರ್ಧಾರ ಕೈಗೊಂಡರೆ ಅದರ ವಿರುದ್ಧ ಹೋಗಲು ಕಷ್ಟವಾಗುತ್ತದೆ. ಟೋಲ್ ಕೇಂದ್ರ ನಿರ್ಮಾಣದಿಂದ ಸ್ಥಳೀಯವಾಗಿ ಆಗುವ ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆ ಸಚಿವರು, ಕಾರ್ಯದರ್ಶಿಗೆ ಕರೆ ಮಾಡಿದರು ಸ್ಪಂದಿಸಲಿಲ್ಲ. ಆ.16ರಂದು ಸಮಾಲೋಚನೆ ನಡೆಸುವುದಾಗಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ಪಡುಬಿದ್ರಿ ಬೆಳ್ಮಣ್ ಕಾರ್ಕಳ ರಾಜ್ಯ ಹೆದ್ದಾರಿ ಟೋಲ್ ಗೇಟ್ ನಿರ್ಮಾಣ ಹೋರಾಟ ಸಮಿತಿ ನೇತೃತ್ವದಲ್ಲಿ ಕಂಚಿನಡ್ಕ ಪ್ರದೇಶದಲ್ಲಿ ಟೋಲ್ ಕೇಂದ್ರ ಸ್ಥಾಪನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್, ಜಿಪಂ ಸಿಇಒ ಪ್ರತೀಕ ಬಾಯಲ್, ಕಾಂಚನ್, ಲಕ್ಷ್ಮಣ್ ಎಲ್.ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಸರ್ವಜ್ಞ ತಂತ್ರಿ ಬೆಳ್ಮಣ್, ನವೀನಚಂದ್ರ ಜೆ.ಶೆಟ್ಟಿ, ವೈ.ಸುಕುಮಾರ್ ಗಣೇಶ್ ಕೋಟ್ಯಾನ್, ನವೀನ್ ಎನ್.ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net