ವಕ್ಫ್ ನೋಟಿಸ್‌ನಿಂದ ರೈತರಿಗೆ ಸಮಸ್ಯೆ

protest
ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್‌ನ ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರಕುಮಾರ್ ಕುಂದಾಪುರ ಮಾತನಾಡಿದರು.
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಮ್ಮಕ್ಕು ಹಾಗೂ ಸಚಿವ ಜಮೀರ್ ಅವರ ಪೋಷಣೆಯಿಂದ ವಕ್ಫ್ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ನಡೆಸಲಾಗುತ್ತಿದೆ. ವಕ್ಫ್ ನೋಟಿಸ್ ಮೂಲಕ ರೈತರಿಗೆ, ಸಾರ್ವಜನಿಕರಿಗೆ ಸಮಸ್ಯೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡು ರೈತರಿಗೆ ಜನಸಾಮಾನ್ಯರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್‌ನ ಲ್ಯಾಂಡ್ ಜಿಹಾದ್ ಖಂಡಿಸಿ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ಬೈಂದೂರು ತಾಲೂಕು ಕಚೇರಿ ಎದುರು ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರ ಈಗಾಗಲೇ ವಕ್ಫ್ ತಿದ್ದುಪಡಿ ವಿಧೇಯಕ ಜಾರಿಗೆ ಎಲ್ಲ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದ್ದು ಮುಂದಿನ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ತಿದ್ದುಪಡಿ ಮಸೂದೆ ಜಾರಿಯಾದರೆ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

ಮಂಡಲ ಅಧ್ಯಕ್ಷ ನೆಲ್ಯಾಡಿ ದೀಪಕ್‌ಕುಮಾರ್ ಶೆಟ್ಟಿ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರಕುಮಾರ್ ಕುಂದಾಪುರ, ಜಿಪಂ ಮಾಜಿ ಸದಸ್ಯರಾದ ಸುರೇಶ್ ಬಟವಾಡಿ, ರೋಹಿತ್ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಿಯದರ್ಶಿನಿ ಬೆಸ್ಕೂರು, ಮಹೇಂದ್ರ ಪೂಜಾರಿ, ಉಮೇಶ್ ಶೆಟ್ಟಿ ಕಲ್ಗದ್ದೆ, ಶ್ಯಾಮಲಾ ಕುಂದರ್, ಶರತ್‌ಕುಮಾರ್ ಶೆಟ್ಟಿ ಉಪ್ಪುಂದ, ಭಾಗೀರಥಿ ಸುರೇಶ್, ಅನಿತಾ ಆರ್. ಕೆ., ಡಾ.ಅತುಲ್ ಕುಮಾರ್ ಶೆಟ್ಟಿ, ಗಜೇಂದ್ರ ಬೇಲೆಮನೆ ಸಹಿತವಾಗಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಂತರ ಬೈಂದೂರು ತಹಸೀಲ್ದಾರ್ ಪ್ರದೀಪ್ ಅರ್. ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net