

ಹುಬ್ಬಳ್ಳಿ: ಪ್ರತಿಯೊಬ್ಬರೂ ಸಮಾಜ ಸೇವೆ ಮಾಡುವ ಮೂಲಕ ತಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕೆಂದು ರೋಟರಿಯನ್ ನಾಗೇಶ ರಿತ್ತಿ ಹೇಳಿದರು.
ಇಲ್ಲಿಯ ಲಿಂಗರಾಜ ನಗರದ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಉಣಕಲ್ ಪ್ರೋಬಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿಂದೆ ಅವಿಭಕ್ತ ಕುಟುಂಬಗಳು ಇದ್ದವು. ಅವು ಇಂದು ಮಾಯವಾಗುತ್ತಿದ್ದು, ಹಿರಿಯರು ಪ್ರೋಬಸ್ ಕ್ಲಬ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಂತೋಷವನ್ನು ಹೆಚ್ಚಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಹಿರಿಯ ಸಂಶೋಧಕ ಡಾ. ಜಿ.ಎಂ. ನಾಗಯ್ಯ, ಪ್ರಾಚಿನ ಕರ್ನಾಟಕದ ಜೀವನ ಮೌಲ್ಯಗಳ ಕುರಿತು ಉಪನ್ಯಾಸ ನೀಡಿದರು.
ಕ್ಲಬ್ ಅಧ್ಯಕ್ಷ ಪ್ರೊ. ಕೆ.ಎಸ್. ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು.
ನೂತನ ಅಧ್ಯ ಡಾ. ಬಿ.ಸಿ. ಕೋಟಿ ಸ್ವಾಗತಿಸಿದರು. ನಿರ್ದೇಶಕ ಡಾ. ಬಿ.ಎಸ್. ಮಾಳವಾಡ ವರದಿ ವಾಚನ ಮಾಡಿದರು. ಉಪಾಧ್ಯಕ್ಷ ಡಾ. ಎಂ.ಬಿ. ಸಜ್ಜನರ ಕಾರ್ಯಕ್ರಮ ನಿರೂಪಿಸಿದರು, ಕಾರ್ಯದರ್ಶಿ ಉಮೇಶ ಪಾಟೀಲ ವಂದಿಸಿದರು.