ಫಲಾನುಭವಿಗಳ ಮನೆ ನಿರ್ಮಾಣಕ್ಕೆ ಮುತುವರ್ಜಿ ವಹಿಸಿ

01 HANUR 4
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ತಪ್ಪಲಿನ ಆಣೆಹೊಲ ಗ್ರಾಮದಲ್ಲಿ ಸಿದ್ದು ನಿವಾಸ್ ಯೋಜನೆಯಡಿ ನಿರ್ಮಾಣವಾಗುತ್ತಿರುವ ಮನೆ ನಿರ್ಮಾಣ ಕಾಮಗಾರಿಯನ್ನು ಶಾಸಕ ಎಂ.ಆರ್ ಮಂಜುನಾಥ್ ಪರಿಶೀಲಸಿದರು. ಚಂದ್ರಶೇಖರ್, ಕಿರಣ್‌ಕುಮಾರ್, ಮಂಜೇಶ್, ಮಾದೇಶ್ ಇತರರು ಇದ್ದರು.
Published on

ಹನೂರು: ಸಿದ್ದು ನಿವಾಸ್ ಯೋಜನೆಯಡಿ ಕೈಗೊಂಡಿರುವ ಮನೆಗಳ ನಿರ್ಮಾಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ಸೂಚನೆ ನೀಡಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟ ತಪ್ಪಲಿನ ಆಣೆಹೊಲ ಗ್ರಾಮದಲ್ಲಿ ಬುಡಕಟ್ಟು ಜನರಿಗೆ ವಸತಿ ಸೌಕರ್ಯವನ್ನು ಕಲ್ಪಿಸುವ ಸಲುವಾಗಿ ಸಿದ್ದು ನಿವಾಸ್ ಯೋಜನೆಯಡಿ ನಿರ್ಮಿಸುತ್ತಿರುವ ಮಾದರಿ ಮನೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ಸಿದ್ದು ನಿವಾಸ್ ಯೋಜನೆಯಡಿ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಆಣೆಹೊಲ ಬುಡಕಟ್ಟು ಕಾಲನಿಯಲ್ಲಿ ಕಾವೇರಿ ಎಂಬ ಫಲಾನುಭವಿ ಹೆಸರಿನಲ್ಲಿ ಮಾದರಿ ಮನೆಯನ್ನು ನಿರ್ಮಿಸಲಾಗುತ್ತಿದೆ. ಹಾಗಾಗಿ ಕಾಮಗಾರಿ ಸಂಬಂಧ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಶೌಚಗೃಹ ಹಾಗೂ ಇನ್ನಿತರ ಅಗತ್ಯ ಮೂಲ ಸೌಕರ್ಯ ಒಳಗೊಂಡಂತೆ ಮನೆಯು ಸುಸಜ್ಜಿತವಾಗಿ ನಿರ್ಮಾಣವಾಗಬೇಕು ಎಂದು ತಿಳಿಸಿದರು.

ಇದೇ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರು.

ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾದಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಪಿಡಿಒ ಕಿರಣ್ ಕುಮಾರ್, ಮುಖಂಡರಾದ ಮಂಜೇಶ್, ಮಾದೇಶ್, ಗೋಪಾಲನಾಯ್ಕ, ವಿಜಯಕುಮಾರ್, ನಿಂಗರಾಜು, ವೆಂಕಟೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net