ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಶನಿವಾರಸಂತೆಯಲ್ಲಿ ನಡೆಯುತ್ತಿರುವ ಪ್ರಾಥಮಿಕ ಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಡಿ.ಸುಜಲಾದೇವಿ ಚಾಲನೆ ನೀಡಿದರು.ವಿಶ್ವನಾಥ್, ದಿನೇಶ್, ಸುನಂದಾ, ಪವನ್ ಕುಮಾರ್, ರಂಗಸ್ವಾಮಿ ಇತರರಿದ್ದಾರೆ.
ಶನಿವಾರಸಂತೆಯಲ್ಲಿ ನಡೆಯುತ್ತಿರುವ ಪ್ರಾಥಮಿಕ ಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಡಿ.ಸುಜಲಾದೇವಿ ಚಾಲನೆ ನೀಡಿದರು.ವಿಶ್ವನಾಥ್, ದಿನೇಶ್, ಸುನಂದಾ, ಪವನ್ ಕುಮಾರ್, ರಂಗಸ್ವಾಮಿ ಇತರರಿದ್ದಾರೆ.
Published on

ಶನಿವಾರಸಂತೆ: ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಗುರುವಾರ ಆಯೋಜಿಸಿರುವ 2024-25ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಹಾಕಿ ಪಂದ್ಯಾವಳಿಗೆ ಪ್ರಾಂಶುಪಾಲೆ ಡಿ.ಸುಜಲಾದೇವಿ ಚಾಲನೆ ನೀಡಿದರು.

ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಟಿ.ವಿಶ್ವನಾಥ್ ಮಾತನಾಡಿ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗುತ್ತದೆ. ಈ ಉದ್ದೇಶದಿಂದ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಪ್ರತಿವರ್ಷ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುತ್ತದೆ. ಈ ಮೂಲಕ ವಲಯ, ತಾಲೂಕು, ಜಿಲ್ಲೆ, ರಾಜ್ಯ, ಅಂತಾರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ನಡೆಸಲಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಗೆಲುವು ಮತ್ತು ಸೋಲನ್ನು ಸಮಾನವಾಗಿ ಸ್ವೀಕರಿಸುವಂತೆ ಕಿವಿಮಾತು ಹೇಳಿದರು.

ಶನಿವಾರಸಂತೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್, ವಲಯ ಕ್ರೀಡಾ ಕಾರ್ಯದರ್ಶಿ ಕೆ.ಪಿ.ಸುನಂದಾ, ವಿವಿಧ ಶಾಲಾ ದೈಹಿಕ ಶಿಕ್ಷಣ ಶಿಕ್ಷರಾದ ಪವನ್‌ಕುಮಾರ್, ಭಾಸ್ಕರ್, ರಾಜೇಶ್, ರಂಗಸ್ವಾಮಿ, ಆದರ್ಶ ಹಾಗೂ ವಿವಿಧ ಶಾಲಾ ತಂಡಗಳ ವ್ಯವಸ್ಥಾಪಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net