ಕಾಸರಗೋಡಲ್ಲಿ ಭಕ್ತರಿಂದ ಪಂಜಿನ ಮೆರವಣಿಗೆ : ಶ್ರೀಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಖಂಡನೆ

New Project (16)
Published on

ಕಾಸರಗೋಡು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಸುಳ್ಳು ಪ್ರಚಾರದ ವಿರುದ್ಧ ಕಾಸರಗೋಡಿನ ಶ್ರೀ ಧರ್ಮಸ್ಥಳ ಕ್ಷೇತ್ರ ಭಕ್ತವೃಂದದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಕಾಸರಗೋಡು ನಗರದಲ್ಲಿ ಜರುಗಿತು.

ನಗರದ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಿಂದ ಆರಂಭಗೊಂಡ ಮೆರವಣಿಗೆ, ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿತ್ತು. ಹಿಂದು ಐಕ್ಯ ವೇದಿ ಕಾಸರಗೋಡು ಜಿಲ್ಲಾಧ್ಯಕ್ಷ ಎಸ್.ಪಿ.ಶಾಜಿ, ವಿಶ್ವ ಹಿಂದು ಪರಿಷತ್ತಿನ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ.ವೆಂಕಟ್ರಮಣ ಹೊಳ್ಳ, ಹಿಂದು ಐಕ್ಯ ವೇದಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜನ್ ಮುಳಿಯಾರ್, ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ ಮಾವಿನಕಟ್ಟೆ, ಕೋಶಾಧಿಕಾರಿ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಬಿ.ಎಂ.ಎಸ್. ಜಿಲ್ಲಾ ಜತೆ ಕಾರ್ಯದರ್ಶಿ ದಿನೇಶ್ ಬಂದ್ಯೋಡು, ಹಿಂದು ಐಕ್ಯ ವೇದಿಯ ಜಿಲ್ಲಾ ಕಾರ್ಯಾಧ್ಯಕ್ಷ ಗೋಪಾಲಕೃಷ್ಣನ್ ತಚ್ಚಂಗಾಡ್, ಹಿರಿಯ ಧಾರ್ಮಿಕ ಮುಖಂಡ ಜಯಾನಂದ ಕುಮಾರ್ ಹೊಸದುರ್ಗ, ವಿಶ್ವ ಹಿಂದು ಪರಿಷತ್ ಕಾಸರಗೋಡು ಪ್ರಖಂಡ ಅಧ್ಯಕ್ಷ ಗುರು ಪ್ರಸಾದ್ ಕೋಟೆಕಣಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net