ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆ

rayanna yuva shakti
Published on

ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿ ನಿಮಿತ್ತ ಆ. 15ರಂದು ಮಧ್ಯಾಹ್ನ 12 ಗಂಟೆಗೆ ಬಂಕಾಪುರ ಚೌಕ ಯಲ್ಲಾಪುರ ಓಣಿಯಿಂದ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆ ಆಯೋಜಿಸಲಾಗಿದೆ ಎಂದು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಶಕ್ತಿ ಅಧ್ಯಕ್ಷ ಚನ್ನಪ್ಪಗೌಡ್ರ ಪಾಟೀಲ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ಯಲ್ಲಾಪುರ ಓಣಿಯಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ ಪಾಲ್ಗೊಳ್ಳುವರು. ಬಳಿಕ ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ನಡೆಯಲಿದೆ. ಕೇರಳದ ಚಂಡಿಮೇಳ ಈ ಭಾರಿಯ ಮೆರವಣಿಗೆಯ ವಿಶೇಷ. ಡೊಳ್ಳು ವಾದ್ಯ, ಝಾಂಜ್, ಇನ್ನಿತರ ತಂಡಗಳು ಇರಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಜಯ ಹಿರೇಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net