ಅನುಗೊಂಡನಹಳ್ಳಿಯಲ್ಲಿ ಅಂಬಾರಿ ಸಡಗರ

Procession with special decoration
Procession with special decoration
Published on

ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ತಾಲೂಕಿನ ಅನುಗೊಂಡನಹಳ್ಳಿಯಲ್ಲಿ ಕಾರ್ತಿಕ ಹುಣ್ಣಿಮೆ ಅಂಗವಾಗಿ ಅಂಬಾರಿಯಲ್ಲಿ ಶ್ರೀ ಬಾಣೇಶ್ವರ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಅಲಂಕಾರದೊಂದಿಗೆ ಮೆರವಣಿಗೆ ನಡೆಸಲಾಯಿತು.
ದೇವರ ವಿಗ್ರಹವನ್ನು ಅಂಬಾರಿಯಲ್ಲಿ ಪ್ರತಿಷ್ಠಾಪಿಸಿ, ವಿವಿಧ ಜನಪದ ಕಲಾತಂಡಗಳ ನೃತ್ಯದೊಂದಿಗೆ ಶಾಸಕ ಶರತ್ ಬಚ್ಚೇಗೌಡ ಬಾಣೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಉತ್ಸವಕ್ಕೆ ಚಾಲನೆ ನೀಡಿದರು. ಈ ನಿಮಿತ್ತ ಮುಂಜಾನೆಯಿಂದಲೇ ದೇವಾಲಯದಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net