

ಉಡುಪಿ: ಪವರ್ ಸಂಸ್ಥೆಯ ಸಹಯೋಗದೊಂದಿಗೆ ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಪ್ರಮೋಷನ್ ಸ್ಪರ್ಧೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪವರ್ ಸಂಸ್ಥೆಯ ಅಧ್ಯಕ್ಷೆ ಶ್ರುತಿ ಶೆಣೈ ಕಾರ್ಯಕ್ರಮ ಉದ್ಘಾಟಿಸಿ, ಪ್ರಸ್ತುತ ಉದ್ಯೋಗಾವಕಾಶಗಳು ಕಡಿಮೆ ಇರುವುದರಿಂದ, ಇಂತಹ ಸ್ಪರ್ಧೆಗಳು ಯುವಜನತೆಗೆ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಪ್ರೇರೇಪಿಸುತ್ತವೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ಅಧ್ಯಕ್ಷತೆ ವಹಿಸಿದ್ದರು. ಪವರ್ ಸಂಸ್ಥೆಯ ತಾರಾ ತಿಮ್ಮಯ್ಯ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಉಮೇಶ್ ಮಯ್ಯ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಗೌರಿ ಎಸ್. ಭಟ್, ಉಪನ್ಯಾಸಕ ಡಾ. ಗಣೇಶಪ್ಪ, ಕಾರ್ಯಕ್ರಮದ ಸಂಯೋಜಕರಾದ ಸೋನಿಯಾ ನರ‌್ಹೊನಾ ಮತ್ತು ಸರಿತಾ ಬಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪ್ರತೀಕ್ಷಾ ಶೆಣೈ ಸ್ವಾಗತಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಗೀತಾ ವಂದಿಸಿದರು.