ಪ್ರೊ. ಜಿ.ಎಸ್. ಸಿದ್ದಲಿಂಗಯ್ಯಗೆ ನುಡಿ ನಮನ

1548777-gs-siddalingaiah
Published on

ಬೆಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಬರಹಗಾರ, ವಿಮರ್ಶಕ ಪ್ರೊ. ಜಿ.ಎಸ್. ಸಿದ್ದಲಿಂಗಯ್ಯ ಗೌರವಾರ್ಥ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಬುಧವಾರ (ಮೇ 14) ಸಂಜೆ 5 ಗಂಟೆಗೆ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಿಡುಮಾಮಿಡಿ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ, ಬೇಲಿಮಠದ ಶ್ರೀ ಶಿವಾನುಭವ ಚರಮೂರ್ತಿ ಶ್ರೀ ಶಿವರುದ್ರ ಸ್ವಾಮೀಜಿ, ಡಾ. ಗೊ.ರು. ಚನ್ನಬಸಪ್ಪ, ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜ ಮೂರ್ತಿ, ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಹಿರಿಯ ಬರಹಗಾರರಾದ ಮಂಡಗದ್ದೆ ಶ್ರೀನಿವಾಸಯ್ಯ, ಡಾ. ಕಾ.ವೆಂ. ಶ್ರೀನಿವಾಸ ಮೂರ್ತಿ, ಪ್ರೊ. ಕೆ.ಇ. ರಾಧಾಕೃಷ್ಣ, ಡಾ. ರುದ್ರೇಶ ಅದರಂಗಿ, ಬಿಎಂಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ. ಆರ್. ಲಕ್ಷ್ಮಿನಾರಾಯಣ ಮತ್ತಿತರರು ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net