

ಮೈಸೂರು: ಜೆಎಸ್‌ಎಸ್ ಮಹಾವಿದ್ಯಾಪೀಠದಿಂದ ಧಾರವಾಡದ ಬೆಲ್ಲದ ಶಿಕ್ಷಣ ಮತ್ತು ಕೃಷಿ ಪ್ರತಿಷ್ಠಾನದಿಂದ ನೀಡಲಾಗುವ ಇ.ವಿ.ಹಾಲಭಾವಿ ಪ್ರಶಸ್ತಿಗೆ ಚಿತ್ರಕಲಾ ಪರಿಷತ್ತಿನ ಉಪಾಧ್ಯಕ್ಷ ಹುಣಸೂರು ತಾಲೂಕು ಕಲ್ಲಹಳ್ಳಿಯ ಪ್ರೊ.ಕೆ.ಎಸ್.ಅಪ್ಪಾಜಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು ಕಾಲೇಜ್ ಆಫ್ ಫೈನ್ ಆರ್ಟ್ಸ್ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬೆಂಗಳೂರು ಕೆಂಪೇಗೌಡ ಪ್ರಶಸ್ತಿ, ಲಲಿತಕಲಾ ಅಕಾಡೆಮಿ ಪ್ರಶಸ್ತಿ, ಮೈಸೂರು ದಸರಾ ಪ್ರಶಸ್ತಿ ಸೇರಿದಂತೆ ಇನ್ನಿತರ ಪ್ರಶಸ್ತಿಗಳು ದೊರೆತಿವೆ. ಪ್ರಸ್ತುತ 2023ರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿಯು ನಗದು, ಫಲಕವನ್ನು ಒಳಗೊಂಡಿದೆ ಎಂದು ಮಹಾವಿದ್ಯಾಪೀಠದ ಶಾಲಾ ಶಿಕ್ಷಣ ವಿಭಾಗದ ನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.