ಸರ್ವಾಧ್ಯಕ್ಷರಾಗಿ ಪ್ರೊ. ಎಂ.ಎಲ್​. ಸಾಮಗ ಆಯ್ಕೆ

UDP-29-7-Saamaga
Published on

ಮೇ 17, 18ರಂದು ಉಡುಪಿ ತಾಲೂಕು ಕಸಾಪ ಸಮ್ಮೇಳನ

ವಿಜಯವಾಣಿ ಸುದ್ದಿಜಾಲ ಉಡುಪಿ

ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 17, 18ರಂದು ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿಕ್ಷಣ ತಜ್ಞ ಪ್ರೊ. ಎಂ.ಎಲ್​. ಸಾಮಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊಡವೂರು ಶಂಕನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್​ ಎಚ್​.ಪಿ. ಅಧ್ಯಕ್ಷತೆಯಲ್ಲಿ ಮಾ.28ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಯಿತು.

ಯಕ್ಷಗಾನ ಕಲಾವಿದ, ವಾಗ್ಮಿ ಹಾಗೂ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆದ ಪ್ರೊ. ಸಾಮಗ ಅವರನ್ನೇ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಘಟಕದ ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಹಾಗೂ ರಂಜನಿ ವಸಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net