

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ. ಬಿ. ರಮೇಶ್ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಕುಲಪತಿಗಳಾಗಿರುವ ಪ್ರೊ. ಕೆ.ಆರ್. ಜಲಜಾ ಅವರು ಪ್ರೊ. ರಮೇಶ್ ಅವರಿಗೆ ಸೋಮವಾರ ಅಧಿಕಾರ ಹಸ್ತಾಂತರಿಸಿದರು.
ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕರಾಗಿರುವ ಪ್ರೊ. ರಮೇಶ್, ಪ್ರಸ್ತುತ ಬೆಂಗಳೂರು ನಗರ ವಿವಿ ಮೌಲ್ಯಮಾಪನ ಕುಲಸಚಿವರಾಗಿ ಎರಡನೇ ಅವಧಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.
ಈ ವೇಳೆ ವಿವಿ ಕುಲಸಚಿವ ಎ. ನವೀನ್ ಜೋಸ್ೆ, ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ, ಸಿಂಡಿಕೇಟ್ ಸದಸ್ಯರು, ಡೀನ್, ವಿಭಾಗ ಮುಖ್ಯಸ್ಥರು, ಹಿರಿಯ ಪ್ರಾಧ್ಯಾಪಕರು ಹಾಗೂ ಇತರೆ ಸಿಬ್ಬಂದಿ ಹಾಜರಿದ್ದು ಶುಭ ಕೋರಿದರು.