

ಗೋಣಿಕೊಪ್ಪ: ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಸಂಯುಕ್ತಾಶ್ರಯದಲ್ಲಿ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ದತ್ತಿನಿಧಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ ಕಾರ್ಯಕ್ರಮವನ್ನು ಕೆಪಿಎಸ್ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.
ಕನ್ನಡ ಶಿಕ್ಷಕಿ ನಳಿನಿ ಮಾತನಾಡಿ, ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾರೆ. ಕಡ್ಡಾಯ ಪ್ರಾಥಮಿಕ ಶಿಕ್ಷಣ ಯೋಜನೆಯ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಂಶುಪಾಲ ಆರ್.ರಮೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ದತ್ತಿದಾನಿಗಳಾದ ಬೆಂಗಳೂರಿನ ಆರ್.ನಾಗೇಂದ್ರ ಕಾಮತ್, ಆರ್.ರಾಜಾರಾವ್, ಪೊನ್ನಂಪೇಟೆ ಸರ್ಕಾರಿ ಕಾಲೇಜಿನ ಉಪ ಪ್ರಾಂಶುಪಾಲ ಎಂ.ಯು ಚಂಗಪ್ಪ, ತಿರುನೆಲ್ಲಿಮಾಡ ಜೀವನ್, ಟಿ.ಕೆ.ವಾಮನ, ಎಂ.ಕೆ.ಚಂದನ್ ಕಾಮತ್, ಕೆ.ವಿ.ರಾಮಕೃಷ್ಣ, ಮಣಿ ಕುಂಜ್ನ, ತಿತಿಮತಿ ಗ್ರಾಮ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಪಿ.ಸಿ.ರಾಮು ಹಾಜರಿದ್ದರು.