ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಲಿ

16Kudaci1
Published on

ಕುಡಚಿ: ಪಟ್ಟಣದಲ್ಲಿ ಎಲ್ಲರೂ ಒಗ್ಗೂಡಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ಆಚರಿಸೋಣ ಎಂದು ಪುರಸಭೆ ಅಧ್ಯಕ್ಷ ಹಮಿದೋದ್ದಿನ್ ರೋಹಿಲೆ ಹೇಳಿದರು.

ಪಟ್ಟಣದ ಪುರಸಭೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಉಪ ತಹಸೀಲ್ದಾರ್ ಎಸ್.ಜಿ.ದೊಡ್ಡಮನಿ ಮಾತನಾಡಿ, ಪ್ರತಿ ಇಲಾಖೆ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಗಣರಾಜ್ಯೋತ್ಸವ ಯಶಸ್ಸಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಪುರಸಭೆ ಉಪಾಧ್ಯಕ್ಷ ಶಿವಪ್ಪ ಗಸ್ತಿ, ಮುಖ್ಯಾಧಿಕಾರಿ ಬಾಬಾಸಾಹೇಬ ಮಾನೆ, ಶಿಕ್ಷಕ ವೈ.ಆರ್.ಯಲ್ಲಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net