ಯಶಸ್ವೀ ಕಲಾತ್ಮಕ ಬದುಕು ಕಲ್ಪಿಸುವ ಸಂಸ್ಥೆ :ಹೆರಿಯ ಮಾಸ್ಟರ್

sanmana
ರೋಟರಿ ಕ್ಲಬ್ ತೆಕ್ಕಟ್ಟೆ ಅಧ್ಯಕ್ಷ ಗಣಪತಿ ಟಿ.ಶ್ರೀಯಾನ್ ಹಾಗೂ ಕಾರ್ಯದರ್ಶಿ ಕೃಷ್ಣ ಮೊಗವೀರ ಅವರನ್ನು ಅಭಿನಂದಿಸಲಾಯಿತು
Published on

ಕೋಟ: ಸಾಮಾಜಿಕ ಬದ್ಧತೆ ಇರುವವರನ್ನು ಮಾತ್ರ ರೋಟರಿಯಂಥ ಸಂಸ್ಥೆ ಗುರುತಿಸುವುದು. ಇಂಥವರು ಸಮಾಜದಲ್ಲಿ ಬಹು ಎತ್ತರಕ್ಕೆ ಏರುವುದಕ್ಕೆ ಸಾಧ್ಯ. ಯಶಸ್ವೀ ಕಲಾವೃಂದ ಮಕ್ಕಳನ್ನು ಸಾಂಸ್ಕೃತಿಕವಾಗಿ ಬೆಳೆಸಿ ಕಲಾತ್ಮಕ ಬದುಕನ್ನು ಕಲ್ಪಿಸುವಂಥ ಸಂಸ್ಥೆ ಎಂದು ಶಿಕ್ಷಕ ಹೆರಿಯ ಮಾಸ್ಟರ್ ಹೇಳಿದರು.

ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಆಶ್ರಯದಲ್ಲಿ ದಿಮ್ಸಾಲ್ ಫಿಲ್ಮ್ಸ್ ಹಾಗೂ ಧಮನಿ ಟ್ರಸ್ಟ್ ಸಹಯೋಗದೊಂದಿಗೆ ಸಿನ್ಸ್ 1999 ಶ್ವೇತಯಾನ-40ರ ಕಾರ್ಯಕ್ರಮದಡಿ ರೋಟರಿ ಕ್ಲಬ್ ತೆಕ್ಕಟ್ಟೆ ಅಧ್ಯಕ್ಷ ಗಣಪತಿ ಟಿ.ಶ್ರೀಯಾನ್ ಹಾಗೂ ಕಾರ್ಯದರ್ಶಿ ಕೃಷ್ಣ ಮೊಗವೀರ ಅವರನ್ನು ಅಭಿನಂದಿಸಿ ಮಾತನಾಡಿದರು.

ಯಕ್ಷಗುರು ಲಂಬೋದರ ಹೆಗಡೆ ನಿಟ್ಟೂರು, ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಗುರುಗಳಾದ ಕೃಷ್ಣಯ್ಯ ಆಚಾರ್ ಬಿದ್ಕಲ್‌ಕಟ್ಟೆ, ಮೋಹನಚಂದ್ರ ಪಂಜಿಗಾರು, ದೀಪಿಕಾ ಸಾಮಗ, ಗೋಪಾಲ ಪೂಜಾರಿ ಕುಂದಾಪುರ ಉಪಸ್ಥಿತರಿದ್ದರು. ಯಶಸ್ವೀ ಕಲಾವೃಂದ ಮಕ್ಕಳ ಮೇಳದ ಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ತಾಳಮದ್ದಳೆ ರಂಗದಲ್ಲಿ ಪ್ರಸ್ತುತಿಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net