

ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳನ್ನು ಮೌಲ್ಯ ವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರು 'ರೈತ ಉದ್ಯಮಿ'ಗಳಾಗಬೇಕು. ವರ್ಷಪೂರ್ತಿ ಕೆಲಸ ಮತ್ತು ಆದಾಯ ಗಳಿಸುವಂತೆ ಆಗಬೇಕು ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಭಿಪ್ರಾಯಪಟ್ಟರು.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಬಾರ್ಡ್ನ 44ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.
ರೈತರ ಮಕ್ಕಳು ನಬಾರ್ಡ್ನ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸುವ ಮೂಲಕ ಗ್ರಾಮೀಣಾಭಿವೃದ್ಧಿಯತ್ತ ಸಾಗಬೇಕು. ಮುಂದಿನ ಎರಡು ವರ್ಷದಲ್ಲಿ ಸರ್ಕಾರದ, ನಿಮ್ಮೆಲ್ಲರ ಸಹಕಾರದೊಂದಿಗೆ ಗ್ರಾಮೀಣಾಭಿವೃದ್ಧಿ ಸಕಾರಗೊಳ್ಳಲು ಸಾಧ್ಯವಿದೆ. ಮೌಲ್ಯ ವರ್ಧಿತ ಉತ್ಪನ್ನಗಳನ್ನಾಗಿ ಮಾರಾಟ ಮಾಡುವ ಮೂಲಕ ಕನಿಷ್ಠ 10 ಪಟ್ಟು ಅಧಿಕ ಆದಾಯವನ್ನು ಗಳಿಸಲು ಸಾಧ್ಯವಾಗುತ್ತದೆ ಎಂದರು.
ಕರ್ನಾಟಕ ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆರ್ಐಡಿಎ್ ಅಡಿಯಲ್ಲಿ 2,408.11 ಕೋಟಿ ಮತ್ತು ಎನ್ಐಡಿಎ ಅಡಿಯಲ್ಲಿ 2,516 ಕೋಟಿ ರೂ.ಮಂಜೂರು ಮಾಡಲಾಗಿದೆ. ದೇವನಹಳ್ಳಿ, ಗೌರಿಬಿದನೂರು ಮತ್ತು ವೇಮಗಲ್ ಭಾಗಗಳಲ್ಲಿ ಕೈಗಾರಿಕಾ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) 4,500 ಕೋಟಿ ರೂ.ಮಂಜೂರು ಮಾಡಲಾಗಿರುವುದು ಈ ವರ್ಷದ ಪ್ರಮುಖ ಯೋಜನೆಯಾಗಿದ್ದು, ಸುಮಾರು 60,000 ಗ್ರಾಮೀಣ ಯುವಕರು ಮತ್ತು ಮಹಿಳೆಯರಿಗೆ ಉದ್ಯೋಗ ಮತ್ತು ಉದ್ಯಮಶೀಲತಾ ಅವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದರು.
ರಾಜ್ಯದಾದ್ಯಂತ ಸ್ವಸಹಾಯ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು ಮತ್ತು ಜಿಐ ಕ್ಲಸ್ಟರ್ಗಳ ವ್ಯಾಪಕ ಶ್ರೇಣಿಯ ಉತ್ಪನ್ನಗಳನ್ನು ಪ್ರಕಾಶಿಸುವ ವಸ್ತುಪ್ರದರ್ಶನದ ಉದ್ಘಾಟನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್, ಭಾರತೀಯ ರಿಸರ್ವ್ ಬ್ಯಾಂಕ್ನ ಪ್ರಾದೇಶಿಕ ನಿರ್ದೇಶಕಿ ಸೋನಾಲಿ ಸೇನ್ ಗುಪ್ತಾ, ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀ ಭವೇಂದ್ರ ಕುಮಾರ್, ಸಹಕಾರಿ ಸಂಘಗಳ ನಿಬಂಧಕರಾದ ಟಿ.ಎಚ್.ಎಂ. ಕುಮಾರ್, ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಂ.ಮಹೇಶ್ ಇದ್ದರು.
ರೈತರು ಕೃಷಿಯ ಜತೆ ಅದರ ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಸಂಸ್ಕರಣಾ ಟಕವನ್ನು ಪ್ರಾರಂಭಿಸುವ ಮುಖೇನ ಹೊಸ ಪ್ರಯತ್ನಗಳನ್ನು ಮಾಡಬೇಕು. ಮೌಲ್ಯವರ್ಧನೆಗೆ ಸಂಬಂಧಿಸಿದಂತೆ ಈಗಾಗಲೇ 35 ಸಾವಿರಕ್ಕೂ ಅಧಿಕ ಯೋಜನೆಗಳು ನಮ್ಮ ರಾಜ್ಯದಲ್ಲಿದ್ದು, ತಮ್ಮ ಕೃಷಿಗೆ ಅನುಕೂಲವಾಗುವುದನ್ನು ಆಯ್ಕೆ ಮಾಡಲೂ ಅವಕಾಶವಿದೆ. ಇದರಿಂದ ಮನೆ ಮನೆಗಳಲ್ಲಿ ಕೈಗಾರಿಕೆ ಸಾಧ್ಯ. ಅಲ್ಲದೆ, 3&6 ಲಕ್ಷ ಕನಿಷ್ಠ ವಾರ್ಷಿಕ ಆದಾಯ ಪಡೆಯುವ ಸಾಧ್ಯತೆಯೂ ಇದೆ. > ಡಾ.ಶಾಲಿನಿ ರಜನೀಶ್, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ
ಕಿರುಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ರೈತ ಉತ್ಪಾದಕ ಸಂಸ್ಥೆಗಳ ಸ್ಪೂರ್ತಿದಾಯಕ ಪ್ರಯಾಣಗಳನ್ನು ದಾಖಲಿಸುವ "ಕರ್ನಾಟಕದಲ್ಲಿ ಎ್ಪಿಒಗಳ ಯಶಸ್ಸಿನ ಕಥೆಗಳು' ಎಂಬ ಕಿರುಪುಸ್ತಕದ ಬಿಡುಗಡೆಗೊಳಿಸಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾರುಕಟ್ಟೆಗಳನ್ನು ಒದಗಿಸಿಕೊಳ್ಳಲು ತಮ್ಮಉತ್ಪನ್ನಗಳಿಗೆ ಮೌಲ್ಯವನ್ನು ಹೆಚ್ಚಿಸಲು ಡಿಜಿಟಲ್ ವೇದಿಕೆಯಾಗಿದೆ.