ಪ್ರಗತಿಯತ್ತ ಕೋರೆ ಸಹಕಾರಿ ಕಾರ್ಖಾನೆ

12CKD3
ಚಿಕ್ಕೋಡಿ ತಾಲೂಕಿನ ಅಂಕಲಿ ಶಿವಾಲಯದಲ್ಲಿ ಸಿ.ಬಿ.ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಹುಟ್ಟುಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ವನಮಹೋತ್ಸವದಲ್ಲಿ ಮಲ್ಲಿಕಾರ್ಜುನ ಕೋರೆ ಮಾತನಾಡಿದರು. ಭರತೇಶ ಬನವಣೆ, ಆರ್.ಟಿ.ದೇಸಾಯಿ, ಸುರೇಶ ಪಾಟೀಲ, ಶುಭಾಂಗಿ ಮಲ್ಲಿಕಾರ್ಜುನ ಕೋರೆ ಇದ್ದರು.
Published on

ಚಿಕ್ಕೋಡಿ: ಚಿಕ್ಕೋಡಿಯ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ಮಾರ್ಗದರ್ಶನದಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಅವರು ಪ್ರಗತಿಪಥದತ್ತ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಕಾರ್ಖಾನೆ ನಿರ್ದೇಶಕ ಭರತೇಶ ಬನವಣೆ ಹೇಳಿದರು.
ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದಲ್ಲಿ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಜನ್ಮದಿನದ ನಿಮಿತ್ತ ಹಮ್ಮಿಕೊಂಡಿದ್ದ ಬುಧವಾರ ವನಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಆರ್.ಟಿ.ದೇಸಾಯಿ ಮಾತನಾಡಿ, ಮಲ್ಲಿಕಾರ್ಜುನ ಕೋರೆ ಅವರು ಸಜ್ಜನ ವ್ಯಕ್ತಿತ್ವ ಹೊಂದಿದ್ದು, ಕಾರ್ಖಾನೆಯ ಅಭಿವೃದ್ಧಿ ವಿಷಯದಲ್ಲಿ ತುರ್ತು ನಿರ್ಣಯ ತೆಗೆದುಕೊಂಡು ಎಲ್ಲರನ್ನೂ ಹುರಿದುಂಬಿಸುತ್ತಾರೆ ಎಂದರು. ಕಾರ್ಮಿಕ ಕಲ್ಯಾಣಾಧಿಕಾರಿ ಶಿವಾನಂದ ಹಕಾರೆ, ತಾಪಂ ಮಾಜಿ ಸದಸ್ಯ ಸುರೇಶ ಪಾಟೀಲ ಮಾತನಾಡಿದರು.

ಗ್ರಾಪಂ ಅಧ್ಯಕ್ಷೆ ಶೈಲಜಾ ಸುರೇಶ ಪಾಟೀಲ, ಶುಭಾಂಗಿ ಮಲ್ಲಿಕಾರ್ಜುನ ಕೋರೆ, ಕಾರ್ಖಾನೆ ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ನಿರ್ದೇಶಕರಾದ ಅಜಿತ ದೇಸಾಯಿ, ಚೇತನ ಪಾಟೀಲ, ಮಹಾವೀರ ಮಿರ್ಜೆ, ಬಿ.ಎ.ಪಾಟೀಲ, ಶೇಖರ ಪಾಟೀಲ, ವಿವೇಕ ಕಮತೆ ಇತರರಿದ್ದರು. ಸಂಜಯ ಚೌಗಲಾ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net