ಬ್ರಹ್ಮಾವರದಲ್ಲಿ ಪ್ರಗತಿ ಪರಿಶೀಲನಾ ಸಭೆ

meeting
ಶಾಸಕ ಕಿರಣ್‌ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಬ್ರಹ್ಮಾವರದಲ್ಲಿ ಕೆಡಿಪಿ ಸಭೆ ನಡೆಯಿತು. ಶಾಸಕ ಯಶ್‌ಪಾಲ್ ಸುವರ್ಣ, ತಹಸೀಲ್ದಾರ್ ಶ್ರೀಕಾಂತ್ ಮೊದಲಾದವರಿದ್ದರು.
Published on

ಬ್ರಹ್ಮಾವರ: ತಾಲೂಕು ಪಂಚಾಯತಿ ವ್ಯಾಪ್ತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಬ್ರಹ್ಮಾವರ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ನಡೆಯಿತು.

ಒಟ್ಟು 32 ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದು, ಮರಗಳ ತೆರವು, ಅರಣ್ಯ ಇಲಾಖೆಯ ಸಮಸ್ಯೆಗಳು, ಅಂಗನವಾಡಿ ಕಾರ್ಯಕರ್ತೆಯರ ವೇತನ ಬಾಕಿ ಸಹಿತ ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಶಾಸಕ ಯಶ್‌ಪಾಲ್ ಸುವರ್ಣ, ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ, ತಾಲೂಕು ಪಂಚಾಯತಿ ಕಾರ್ಯನಿರ್ವಣಾಧಿಕಾರಿ ಎಚ್.ವಿ ಇಬ್ರಾಹಿಂಪುರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net