ಶಾಲೆ ಬಿಟ್ಟ ಮಕ್ಕಳನ್ನು ಪುನಃ ಸೇರಿಸಿ

13 HBD 04
Published on

ಹುಮನಾಬಾದ್: ಶಾಲೆ ಬಿಟ್ಟ ಮತ್ತು ಶಾಲೆಯಿಂದ ಹೊರಗುಳಿದ ಪ್ರತಿ ಮಕ್ಕಳನ್ನು ಪುನಃ ಸೇರಿಸಲು ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಪಂನಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ರಚನೆ ಮಾಡಬೇಕು. ಶಿಕ್ಷಣ ಕಾರ್ಯ ಪಡೆ ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಸಭೆ ನಡೆಸಬೇಕು. ಪಟ್ಟಣ ಸೇರಿ ಗ್ರಾಮೀಣ ಭಾಗದ ಪ್ರತಿಯೊಂದು ಸರ್ಕಾರಿ ಸ್ಥಳಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ಹಾಗೂ ಪೊಲೀಸ್ ಸಹಾಯವಾಣಿ ೧೧೧೨ಯ ನಾಮಫಲಕ ಹಾಕಿಸಬೇಕು ಎಂದು ಹೇಳಿದರು.

ಸರ್ಕಾರಿ ಹಾಗೂ ಅನುದಾನಿತ ಸೇರಿ ಖಾಸಗಿ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ೨೦೧೬ ಅನ್ವಯ ಸಮಿತಿ ರಚಿಸಿ ಕಾಲ ಕಾಲಕ್ಕೆ ಸಭೆ ನಡೆಸುವ ಮೂಲಕ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳಿಗೆ ಕ್ರಮಕೈಗೊಳ್ಳಲಾಗುವುದರ ಜತೆಗೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದರು.
ತಹಸೀಲ್ದಾರ್ ಅಂಜುಂ ತಬಸ್ಸುಮ್, ತಾಪಂ ಇಒ ದಿಪೀಕಾ ನಾಯ್ಕರ್, ಸಿಪಿಐ ಗುರುಲಿಂಗಪ್ಪ ಪಾಟೀಲ್, ಗೌರಿಶಂಕರ ಪರತಾಪುರೆ ಸೇರಿ ಇತರ ಇಲಾಖೆ ಅಧಿಕಾರಿಗಳು ಇದ್ದರು.

ಪೊಲೀಸ್ ಠಾಣೆ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ: ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಇಲ್ಲಿಯ ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ನವಜಾತ ಶಿಶು ಆರೈಕೆ ಘಟಕ ಪರಿಶೀಲಿಸಿದರು. ಠಾಣೆಯಲ್ಲಿನ ತೆರದ ಮನೆ ಕಾರ್ಯಕ್ರಮ, ಮಕ್ಕಳ ಹಾಗೂ ಪೊಲೀಸ್ ಸಹಾಯವಾಣಿ, ಸಲಹಾ ಪೆಟ್ಟಿಗೆ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡ, ಸಿಪಿಐ ಗುರುಲಿಂಗಪ್ಪ ಪಾಟೀಲ್, ಪಿಎಸ್‌ಐ, ಪೊಲೀಸ್ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net