ಐತಿಹಾಸಿಕ ಕಿತ್ತೂರು ತಾಲೂಕಿಗೆ ಹೊಸ ಮೆರಗು ತರೋಣ; ಶಾಸಕ‌ ಬಾಬಾಸಾಹೇಬ ಪಾಟೀಲ ಆಶಯ

IMG-20230526-WA0057.webp
Published on

ಬೆಳಗಾವಿ : ಕ್ಷೇತ್ರದ ಜನರಿಗೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ತಲುಪಿಸುವುದರ ಜತೆಗೆ ಗುಣಮಟ್ಟದ ಕಾಮಗಾರಿಗಳ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಸಾಧಿಸಲು ಅಧಿಕಾರಿಗಳು ಹಾಗೂ ನೌಕರರು ಪ್ರಾಮಾಣಿಕ ಸಹಕಾರ ನೀಡಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಐತಿಹಾಸಿಕ ಚನ್ನಮ್ಮ ಕಿತ್ತೂರು ತಾಲೂಕಿಗೆ ಹೊಸ ಮೆರಗು ನೀಡೋಣ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ತಾಲೂಕು ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಕರೆಯಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರಿಗೆ ತೊಂದರೆ ಆಗದಂತೆ ಪ್ರತಿಯೊಬ್ಬ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಿ ಕೆಲಸಗಳನ್ನು ಬೇಗ ಮಾಡಿಕೊಡಬೇಕು ಎಂದು ತಿಳಿಸಿದರು.

ತಾಲೂಕಿನ ಸಮಗ್ರ ಅಭಿವೃದ್ಧಿ ಆಗಬೇಕಾದರೆ ಗುಣಮಟ್ಟದ ಕೆಲಸಗಳಿಗೆ ಆದ್ಯತೆ ನೀಡಬೇಕು. ಕುಡಿಯುವ ನೀರು, ಗುಣಮಟ್ಟದ ಶಿಕ್ಷಣ ಹಾಗೂ ರಸ್ತೆ ಸಾರಿಗೆ ಸಂಪರ್ಕ, ಕೃಷಿ ಕಾರ್ಯಕ್ಕೆ ಸಮರ್ಪಕ ಬೀಜಗೊಬ್ಬರ ವಿತರಣೆ ಸೇರಿದಂತೆ ಎಲ್ಲ ಸರ್ಕಾರಿ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಯಗಳ ಎಲ್ಲರೂ ಕೈ ಜೋಡಿಸಿ ಶ್ರಮಿಸೋಣ ಎಂದು ಹೇಳಿದರು.

ಕಿತ್ತೂರು ತಾಲೂಕು ಪಂಚಾಯಿತಿಯಲ್ಲಿ ನೂತನ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ ರವೀಂದ್ರ ಹಾದಿಮನಿ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್.ಪಿ.ಖಾನಪೂರೆ, ಸಹಾಯಕ ಲೆಕ್ಕಾಧಿಕಾರಿಯಾದ ಈರಣ್ಣ ಕಮ್ಮಾರ, ಸಹಾಯಕ ನಿರ್ದೇಶಕರಾದ ಸುರೇಶ ನಾಗೋಜಿ, ಲಿಂಗರಾಜ ಹಲಕರ್ಣಿಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಕಿತ್ತೂರು ತಾಲೂಕು ಪಂಚಾಯಿತಿಯಲ್ಲಿ ನೂತನ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ ರವೀಂದ್ರ ಹಾದಿಮನಿ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್.ಪಿ.ಖಾನಪೂರೆ, ಸಹಾಯಕ ಲೆಕ್ಕಾಧಿಕಾರಿಯಾದ ಈರಣ್ಣ ಕಮ್ಮಾರ, ಸಹಾಯಕ ನಿರ್ದೇಶಕರಾದ ಸುರೇಶ ನಾಗೋಜಿ, ಲಿಂಗರಾಜ ಹಲಕರ್ಣಿಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಕಿತ್ತೂರು ತಹಸೀಲ್ದಾರ ರವೀಂದ್ರ ಹಾದಿಮನಿ ಮಾತನಾಡಿ, ಪ್ರತಿಯೊಂದು ಇಲಾಖೆಯಲ್ಲಿ ಉತ್ತಮ ಕಾರ್ಯಕ್ಷಮತೆಯಿಂದ ಕಾಪಾಡಿಕೊಂಡು ಕೆಲಸ ಮಾಡಲಾಗುತ್ತಿದೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ಉತ್ತಮ ತಾಲೂಕು ಕಟ್ಟಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಕಿತ್ತೂರು ಮತಕ್ಷೇತ್ರದ ಶಾಸಕರಿಗೆ ತಾಲೂಕು ಪಂಚಾಯತ ವತಿಯಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್.ಪಿ.ಖಾನಪೂರೆ, ಸಹಾಯಕ ನಿರ್ದೇಶಕರಾದ ಸುರೇಶ ನಾಗೋಜಿ, ಲಿಂಗರಾಜ ಹಲಕರ್ಣಿಮಠ, ಸಹಾಯಕ ಲೆಕ್ಕಾಧಿಕಾರಿಯಾದ ಈರಣ್ಣ ಕಮ್ಮಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net