ಪ್ರಗತಿ ಪರಿಶೀಲನಾ ಸಭೆ 5ರಂದು

WEB LOGO
Published on

ಧಾರವಾಡ: ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಎಸ್​. ಆರ್​. ಪಾಟೀಲ ಅಧ್ಯಕ್ಷತೆಯಲ್ಲಿ ಮೇ 5ರಂದು ಬೆಳಗ್ಗೆ 10.30ಕ್ಕೆ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಗೆ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಲು ಜಿಪಂ ಸಿಇಒ ಭುವನೇಶ ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net