ಪ್ರಗತಿ ಪರಿಶೀಲನಾ ಸಭೆ 6ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್​.ಆರ್​. ಪಾಟೀಲ ಅಧ್ಯಕ್ಷತೆಯಲ್ಲಿ ಜ. 6ರಂದು ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಎಲ್ಲ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಗೆ ತಮ್ಮ ಇಲಾಖೆ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಲು ಜಿಪಂ ಸಿಇಒ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net