

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಸೇವಾಪ್ರತಿನಿಧಿಗಳು ಹಾಗೂ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿ ಪ್ರಗತಿ ಪರಿಶೀಲನಾ ಕಾರ್ಯಾಗಾರ ಕಡಬದಲ್ಲಿ ನಡೆಯಿತು.
ಕರಾವಳಿ ಪ್ರಾದೇಶಿಕ ವ್ಯಾಪ್ತಿಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಕಾರ್ಯಾಗಾರ ಉದ್ಘಾಟಿಸಿದರು. 2024-25ನೇ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಕಾರ್ಯಕರ್ತರನ್ನು ಬಹುಮಾನ ನೀಡಿ ಅಭಿನಂದಿಸಲಾಯಿತು.
ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಕಡಬ ತಾಲೂಕಿನಲ್ಲಿ ಯೋಜನೆಯ ಕಾರ್ಯಕ್ರಮಗಳನ್ನು ಅನುಷ್ಠಾನಿಸುವ ಕಾರ್ಯವೈಖರಿ ಕುರಿತಾಗಿ ಮಾರ್ಗದರ್ಶನ ನೀಡಿದರು. ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಕಡಬ ತಾಲೂಕು ಯೋಜನಾ ಕಚೇರಿ ಹಣಕಾಸು ಪ್ರಬಂಧಕಿ ಸುಜಾತಾ, ಸಹಾಯಕ ಪ್ರಬಂಧಕ ಯಶವಂತ್ ಕಾರ್ಯಕರ್ತರ ಸಾಧನಾ ವರದಿ ಮಂಡಿಸಿದರು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನಾ ನಿರೂಪಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ವಂದಿಸಿದರು.