ಡಿಜೆ ಬಳಕೆ ಸಂಪೂರ್ಣ ನಿಷೇಧಕ್ಕೆ‌ ಆಗ್ರಹ

PROHIBIT DJ USE PUBLIC PROGRAME MEMORANDUM KOPPAL DC OFFICE
ಡಿಜೆ ಬಳಕೆ ನಿಷೇಧಕ್ಕೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಬುಧವಾರ ಕೊಪ್ಪಳದಲ್ಲಿ ಡಿಸಿ ಕಚೇರಿ ಸಿಬ್ಬಂದಿ ಜಯಮ್ಮಗೆ ಮನವಿ ಸಲ್ಲಿಸಿದರು. ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು, ಬಸವರಾಜ ಶೀಲವಂತರ, ಮಹಾಂತೇಶ ಕೊತಬಾಳ, ಬಸವರಾಜ ನರೇಗಲ್ ಇದ್ದರು.
Published on

ಕೊಪ್ಪಳ: ಸಾರ್ವಜನಿಕ ಸಭೆ, ಸಮಾರಂಭ, ಮೆರವಣಿಗೆಯಲ್ಲಿ ಡಿಜೆ ಬಳಕೆ ನಿಷೇಧಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಬುಧವಾರ ಡಿಸಿ ನಲಿನ್ ಅತುಲ್‌ಗೆ ಮನವಿ ಸಲ್ಲಿಸಿದರು.

ಹಬ್ಬ ಸಂದರ್ಭದಲ್ಲಿ ಸಾರ್ವಜನಿಕ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡದಂತೆ ಈ ಹಿಂದೆ ಮನವಿ ಸಲ್ಲಿಸಿದ್ದೆವು. ಆದರೆ, ರಾಜಕಾರಣಿಗಳು, ಇನ್ನಿತರರ ಒತ್ತಡಕ್ಕೆ ಮಣಿದು ಪೊಲೀಸರು ಅಸಹಾಯಕರಾಗಿದ್ದಾರೆ. ಡಿಜೆಯಿಂದ ಗಂಗಾವತಿಯಲ್ಲಿ ಯುವಕ ಸುದೀಪ್ ಸಾವನ್ನಪ್ಪಿದ್ದಾನೆ.

ಕಾಟಾಚಾರಕ್ಕೆಂಬಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿ ಸುಮ್ಮನಾಗಿದ್ದಾರೆ. ರಾಯಚೂರು, ದಾವಣಗೆರೆ ಸೇರಿ ಇತರೆಡೆಯೂ ಸಾವು ಸಂಭವಿಸಿವೆ ಎಂದು ಆರೋಪಿಸಿದರು.

ಕೂಡಲೇ ಸಾರ್ವಜನಿಕ ಸಭೆ, ಸಮಾರಂಭ, ಮೆರವಣಿಗೆಯಲ್ಲಿ ಡಿಜೆ ಬಳಕೆ ಸಂಪೂರ್ಣ ನಿಲ್ಲಿಬೇಕು. ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು.

ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯ ಪೀಡಿತರ ಆರೋಗ್ಯ ದೃಷ್ಟಿಯಿಂದ ನಿಷೇಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಿ. ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಪಾಲಿಸದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು, ಬಸವರಾಜ ಶೀಲವಂತರ, ಮಹಾಂತೇಶ ಕೊತಬಾಳ, ಬಸವರಾಜ ನರೇಗಲ್, ಶಿವಪ್ಪ ಹಡಪದ, ಡಿ.ಎಚ್.ಪೂಜಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net