ನಿಷೇಧಿಕ ಮಾದಕ ವಸ್ತು ಮಾರುತ್ತಿದ್ದವ ವಶಕ್ಕೆ

crime
Published on

ಹುಬ್ಬಳ್ಳಿ: ನಿಷೇಧಿತ ಮಾದಕ ವಸ್ತು ಮಾರಾಟ ಆರೋಪದಡಿ ನಗರದ ಚನ್ನಮ್ಮ ವೃತ್ತದಲ್ಲಿರುವ ಮೆಡಿಕಲ್ ಸ್ಟೋರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ತಮಿಳುನಾಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರದೀಪ ಎನ್ನುವಾತನ್ನು ವಶಕ್ಕೆ ಪಡೆದಿರುವ ಪೊಲೀಸರು, ಕೊಯಮತ್ತೂರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಕುರಿತು ಸ್ಥಳೀಯ ಪೊಲೀಸರು ಏನನ್ನೂ ಹೇಳುತ್ತಿಲ್ಲ.
ಕಳೆದ ವರ್ಷ ಜನತಾ ಬಜಾರ್‌ನ ಮೆಡಿಕಲ್ ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಇದೇ ಆರೋಪದಡಿ ತಮಿಳುನಾಡು ಪೊಲೀಸರು ಬಂಧಿಸಿ ಕರೆದೊಯ್ದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net