

ಧಾರವಾಡ: ಮತ ಎಣಿಕೆ ಅಂಗವಾಗಿ ಜೂ. 2ರಿಂದ 5ರವರೆಗೆ ಕೃಷಿ ವಿಶ್ವವಿದ್ಯಾಲಯದ ಮತ ಏಣಿಕೆ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಽಕಾರಿ ಆದೇಶಿಸಿದ್ದಾರೆ. ಜೂ 2ರ ಬೆಳಗ್ಗೆ 6ರಿಂದ ಜೂ. 5ರ ಸಂಜೆ 6ರವರೆಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಽಕಾರಿ ಆದೇಶದಲ್ಲಿ ತಿಳಿಸಿದ್ದಾರೆ.