ಮಾನಸಗಂಗೋತ್ರಿಯಲ್ಲಿ ವಾಯು ವಿಹಾರ ನಿಷೇಧ

Manasagangothri
Published on

ಮೈಸೂರು: ನಗರದ ಮಾನಸಗಂಗೋತ್ರಿಯಲ್ಲಿ ನಡೆದ ನಿವೃತ್ತ ಐಬಿ (ಇಂಟಲಿಜೆನ್ಸ್ ಬ್ಯೂರೋ) ಅಧಿಕಾರಿ ಆರ್.ಎನ್.ಕುಲಕರ್ಣಿ ಮೇಲೆ ಕಾರು ಹರಿಸಿ ಹತ್ಯೆ ನಡೆಸಿರುವ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಶಂಕಿತ ಮೂವರನ್ನು ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಮಾನಸಗಂಗೋತ್ರಿಯಲ್ಲಿ ವಾಯು ವಿಹಾರಕ್ಕೆ ಮೈಸೂರು ವಿಶ್ವ ವಿದ್ಯಾಲಯ ನಿಷೇಧ ಹೇರಿದೆ.

ಸದ್ಯ ಮಾನಸಗಂಗೋತ್ರಿಯಲ್ಲಿ ನಿವೃತ್ತ ಐಬಿ ಅಧಿಕಾರಿ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಆತಂಕದ ವಾತಾ ರಣ ನಿರ್ಮಾಣವಾಗಿದೆ. ಅಲ್ಲದೆ ಪ್ರಕರಣದ ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ತನಿಖೆಗೆ ಯಾವುದೇ ರೀತಿಯಲ್ಲೂ ಅಡ್ಡಿ ಆಗಬಾರದು ಎಂಬ ಉದ್ದೇಶದಿಂದ ಶನಿವಾರ ನಡೆದ ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಮಾನಸಗಂಗೋತ್ರಿಯಲ್ಲಿ ಒಂದು ತಿಂಗಳವರೆಗೆ ಬೆಳಗ್ಗೆ ಹಾಗೂ ಸಂಜೆ ವಾಯು ವಿಹಾರವನ್ನು ನಿಷೇಧಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net