'ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು'

'Projects must be completed within time limits'
Published on

ಮಡಿಕೇರಿ:

ಸರ್ಕಾರದ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಸೂಚಿಸಿದರು. ಜಿ.ಪಂ.ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚಾಯತ್ ರಾಜ್ ಇಲಾಖೆಗೆ ಸಂಬAಧಿಸಿದAತೆ ತೆರಿಗೆ ವಸೂಲಾತಿ, ಗ್ರಂಥಾಲಯಗಳ ಉನ್ನತೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಈಗಾಗಲೇ ಜಿಲ್ಲೆಗೆ ೫ ಲಕ್ಷ ಮಾನವ ದಿನಗಳನ್ನು ಸೂಚಿಸುವ ಗುರಿ ನೀಡಲಾಗಿದೆ. ಈ ವರೆಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿಯೂ ಸಾಕಷ್ಟು ಅಭಿವೃದ್ಧಿ ಕಾರ್ಯ ಮುಂದುವರೆಸಬೇಕು. ಸಾಮಾಜಿಕ ಲೆಕ್ಕಪರಿಶೋಧನೆಗೆ ಸಂಬAಧಿಸಿದAತೆ ವಸೂಲಾತಿ ಮಾಡಿ, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಬೇಕು.

ಪ್ರತಿ ತಿಂಗಳು ೫೦,೦೦೦ ಮಾನವ ದಿನಗಳನ್ನು ಸೃಜಿಸಬೇಕು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರತಿ ತಿಂಗಳು ರೋಜ್‌ಗಾರ್ ದಿನಾಚರಣೆ ಮಾಡುವ ಮೂಲಕ ಜನರಿಗೆ ಯೋಜನೆಯ ಮಾಹಿತಿ ನೀಡಿ ಉದ್ಯೋಗ ಒದಗಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗಳು ಕಡ್ಡಾಯವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸಬೇಕು ಎನ್‌ಆರ್‌ಎಲ್‌ಎಂ ವತಿಯಿಂದ ಮಹಿಳೆಯರಿಗೆ ಸ್ವಚ್ಛ ವಾಹಿನಿ ಚಲಾಯಿಸಲು ವಾಹನ ಚಾಲನಾ ತರಬೇತಿ ನೀಡಲಾಗಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ಪ್ರತಿ ಗ್ರಾಮದಲ್ಲಿಯೂ ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಕರೆ ಮಾಡಿದಾಗ ತಪ್ಪದೇ ಕರೆ ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲು ಬಾಕಿ ಇರುವ ಎಸ್.ಡಬ್ಲ್ಯೂ.ಎಂ. ಶೆಡ್‌ಗಳ ಕಾಮಗಾರಿಗಳನ್ನು ನಿಯಮಾನುಸಾರ ಕೈಗೆತ್ತಿಕೊಳ್ಳಬೇಕು ಎಂದರು.

ಜಿ.ಪA. ಉಪ ಕಾರ್ಯದರ್ಶಿ ಜಿ. ಧನರಾಜು ಮಾತನಾಡಿ, ವಸತಿ ಯೋಜನೆಯಡಿಯಲ್ಲಿ ಬಾಕಿ ಇರುವ ಮನೆಗಳನ್ನು ಪೂರ್ಣಗೊಳಿಸಬೇಕು. ಮಳೆಗಾಲವಾಗಿದ್ದು ಹೆಚ್ಚು ಎಚ್ಚರಿಕೆ ಮತ್ತು ಮುತುವರ್ಜಿಯಿಂದ ಪಿಡಿಒಗಳು ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ತಾ.ಪಂ. ಇಒಗಳಾದ ಶೇಖರ್, ಅಪ್ಪಣ್ಣ, ವೀರಣ್ಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಸುರೇಶ್ ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net