ಯೋಜನೆಗಳು ಅರ್ಹರಿಗೆ ಸಿಗುವಂತಾಗಲಿ

MLA
Published on

ಬೈಂದೂರು: ರಾಜ್ಯ ಹಾಗೂ ಕೇಂದ್ರ ಪುರಸ್ಕೃತ ಹಲವಾರು ತೋಟಗಾರಿಕಾ ಯೋಜನೆಗಳು ಚಾಲ್ತಿಯಲ್ಲಿದ್ದು, ತೋಟಗಾರಿಕಾ ಬೆಳೆಗಾರರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಬೈಂದೂರು ತಾಲೂಕು ಆಡಳಿತ ಕಚೇರಿಯಲ್ಲಿ ತೋಟಗಾರಿಕಾ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ಪ್ರತಿಯೊಂದು ಯೋಜನೆ ಅನರ್ಹರ ಪಾಲಾಗುತಿದ್ದು, ಇಲಾಖಾ ಅಧಿಕಾರಿಗಳು ಅರ್ಹರನ್ನು ಹುಡುಕಿ ಅವರಿಗೆ ತೋಟಗಾರಿಕಾ ಯೋಜನೆಯ ಸೌಲಭ್ಯ ಒದಗಿಸಬೇಕು ಎಂದರು.

ಈ ವೇಳೆ ಕ್ಷೇತ್ರದ ಸುಮಾರು 17 ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಮಂಜೂರಾತಿ ಪತ್ರ ವಿತರಿಸಿದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಬೈಂದೂರು ತಹಸೀಲ್ದಾರ್, ಸಹಾಯಕ ತೋಟಗಾರಿಕಾ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net