ಕೊಟ್ಟ ಭರವಸೆ ಈಡೇರಿಕೆ ಗ್ಯಾರಂಟಿ ಎಂದ ಶಾಸಕ ಶಾಂತನಗೌಡ

promise, fulfill, guarantee, legislate,
Published on

ಹೊನ್ನಾಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆ ಮುನ್ನ ಘೋಷಣೆ ಮಾಡಿರುವಂತೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತದೆ. ಈ ಬಗ್ಗೆ ಅನುಮಾನ ಬೇಡ ಎಂದು ಶಾಸಕ ಡಿ.ಜಿ. ಶಾಂತನಗೌಡ ತಿಳಿಸಿದರು.

ಹಿರೇಕಲ್ಮಠದ ಸಮುದಾಯ ಭವನದಲ್ಲಿ ಭಾನುವಾರ ಮತದಾರರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಪಕ್ಷದವರ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯನವರ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮ ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಸಹಕಾರಿಯಾಯಿತು ಎಂದರು.

ರಾಜಕೀಯದಲ್ಲಿ ಸೋಲು ಗೆಲುವುಗಳನ್ನು ಸಮನಾಗಿ ಸ್ವೀಕರಿಸುವ ಮನೋಭಾವನೆ ಇರಬೇಕು. ಸೋತಾಗ ಅಳುವ ಅವಶ್ಯಕತೆ ಇಲ್ಲ. ನಾನು ಸಾಕಷ್ಟು ಸೋಲು ಕಂಡಿದ್ದೇನೆ. ಆದರೆ, ಎಂದಿಗೂ ಅಳುತ್ತಾ ಕೂರಲಿಲ್ಲ ಎಂದರು.

ಕಾನೂನು ಬಾಹಿರ ಕೆಲಸ

ಹಿಂದಿನ ಶಾಸಕರ ಅಧಿಕಾರಾವಧಿಯಲ್ಲಿ ಸಾಕಷ್ಟು ಇಲಾಖೆಗಳಲ್ಲಿ ಕಾನೂನು ಬಾಹಿರ ಕೆಲಸ ನಡೆದಿವೆ. ಇಂದಿನಿಂದ ಶನಿವಾರದವರೆಗೆ ತಾಲೂಕಿನ ಎಲ್ಲ ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ಕೆಲಸ ಕಾರ್ಯಗಳ ಬಗ್ಗೆ ಪರಿವೀಕ್ಷಣೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಮಾಜಿ ಶಾಸಕ ಡಾ.ಡಿ.ಬಿ. ಗಂಗಪ್ಪ, ಕೆಪಿಸಿಸಿ ಸದಸ್ಯ ಡಾ.ಈಶ್ವರ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಶಿವಯೋಗಿ, ಆರ್. ನಾಗಪ್ಪ, ಶಿಮುಲ್ ನಿರ್ದೇಶಕ ಹನುಮನಹಳ್ಳಿ ಬಸವರಾಜಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ. ಷಣ್ಮುಖಪ್ಪ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net