ಕಾಲಮಿತಿಯಲ್ಲಿ ಅಹವಾಲು ಪರಿಹರಿಸುವ ಭರವಸೆ

21 vikram 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಂಘ, ಸಂಸ್ಥೆ ಹಾಗೂ ಜನರಿಂದ 213 ಅಹವಾಲುಗಳನ್ನು ಸ್ವೀಕರಿಸಲಾಯಿತು.

ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ಸಂತೋಷ ಲಾಡ್, ಸಲ್ಲಿಕೆಯಾದ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಕೆಲ ಮನವಿಗಳು ಸರ್ಕಾರದ ನೀತಿ, ನಿರೂಪಣೆಗೆ ಒಳಪಡಬೇಕಾಗುತ್ತದೆ. ಕೆಲವು ಕೋರ್ಟ್​ ವ್ಯಾಜ್ಯಗಳಾಗಿರುತ್ತವೆ. ಇವುಗಳಿಗೆ ಹಿಂಬರಹ ನೀಡಿ ಕಳಿಸಲಾಗುತ್ತದೆ. ಕೆಲ ಜನರು ವೈಯಕ್ತಿಕ ಸಮಸ್ಯೆ, ಆಸ್ತಿ ಜಗಳ, ಸಂಬಂಧಿಕರ ಕೇಸ್​, ಆಂತರಿಕ ಜಗಳ ಹೀಗೆ ವಿವಿಧ ರೀತಿಯ ಸಮಸ್ಯೆಗಳನ್ನು ಸಲ್ಲಿಸುತ್ತಾರೆ. ಇವುಗಳನ್ನು ಸಹ ಪರಿಶೀಲಿಸಿ, ಸಾಧ್ಯವಾದಷ್ಟು ಪರಿಹರಿಸಲು ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಲಾಗುತ್ತಿದೆ ಎಂದರು.

ಜನತಾ ದರ್ಶನದಲ್ಲಿ ಒಟ್ಟು 213 ಅಹವಾಲುಗಳು ಸ್ವೀಕೃತವಾಗಿವೆ. ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಡಾ ಅಧ್ಯಕ್ಷ ಶಾಕೀರ್​ ಸನದಿ, ಪೊಲೀಸ್​ ಆಯುಕ್ತ ಎನ್​.ಶಶಿಕುಮಾರ, ಜಿಪಂ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಡಿಸಿಪಿ ಮಾನಿಂಗ ನಂದಗಾವಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್​, ಜಿಪಂ ಉಪ ಕಾರ್ಯದರ್ಶಿ ಬಿ.ಎಸ್​. ಮುಗನೂರಮಠ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net