

ಯಲಬುರ್ಗಾ: ಸ್ಥಗಿತವಾಗಿರುವ ಮುಖ್ಯಶಿಕ್ಷಕರ ಹಾಗೂ ಹಿರಿಯ ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾಲೂಕಿನ ಹುಲೇಗುಡ್ಡ ಗ್ರಾಮದಲ್ಲಿ ಸೋಮವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ:ಶಿಕ್ಷಣ ಸಚಿವಗೆ ಶಾಸಕ ಪೂಂಜ ಮನವಿ
2017ರಿಂದ ನೇಮಕಾತಿ ನಿಯಮಗಳಿಂದ ಆಗಿರುವ ಅನ್ಯಾಯ ಸರಿಪಡಿಸುವುದು. ಗುಣಾತ್ಮಕ ಶಿಕ್ಷಣದ ದೃಷ್ಟಿಯಿಂದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಎಲ್‌ಒ ಕಾರ್ಯದಿಂದ ಮುಕ್ತಿಗೊಳಿಸುವುದು. ಹೆಚ್ಚುವರಿ ಶಿಕ್ಷಕರನ್ನು ಗುರುತಿಸುವಾಗ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಅನುಪಾತದಿಂದ ಹೊರಗಿಡುವುದು. ತರಗತಿಗೊಬ್ಬರು ಶಿಕ್ಷಕರಿರುವಂತೆ ನೋಡಿಕೊಳ್ಳುವುದು. ಎಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎಸ್.ವಿ.ಧರಣಾ, ಗೌರವಾಧ್ಯಕ್ಷ ಶರಣಯ್ಯ ಸರಗಣಾಚಾರ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಸಿದ್ದಲಿಂಗಪ್ಪ ಶ್ಯಾಗೋಟಿ, ಕಾರ್ಯದರ್ಶಿ ಸಂಗಯ್ಯ ಹಿರೇಮಠ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಸವರಾಜ ಮುಳುಗುಂದ, ಪ್ರಮುಖರಾದ ಬಸವರಾಜ ಹವಳೆ, ಮೆಹಬೂಬ ಬಾದಶಹ, ಭಾಷಾ ಅಲಿ ಇತರರಿದ್ದರು.