ಸೂಕ್ತ ನಿರ್ವಹಿಳೆಯರ ಸಬಲೀಕರಣಕ್ಕೆ ಉತ್ತೇಜನ

sri okkuta
ನೆಮ್ಮಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಮಾಸಿಕ ಸಂತೆಯನ್ನು ಒಕ್ಕೂಟದ ಅಧ್ಯಕ್ಷೆ ವಸಂತಿ, ಗ್ರಾಪಂ ಉಪಾಧ್ಯಕ್ಷೆ ವಾಣಿ ಉದ್ಫಾಟಿಸಿದರು. ಚೈತ್ರಾ, ಸೌಮ್ಯಾ, ಪವಿತ್ರಾ, ಆದರ್ಶ ಇತರರಿದ್ದರು.
Published on

ಶೃಂಗೇರಿ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆರ್ಥಿಕ ಸಬಲೀಕರಣಕ್ಕಾಗಿ ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆ ಪೂರಕವಾಗಿದೆ ಎಂದು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಸಂತಿ ಹೇಳಿದರು.

ನೆಮ್ಮಾರ್ ಗ್ರಾಪಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಮಾಸಿಕ ಸಂತೆಯಲ್ಲಿ ಮಾತನಾಡಿ, ಸ್ವಉದ್ಯೋಗ ಗ್ರಾಮೀಣ ಪ್ರದೇಶಗಳಲ್ಲಿ ಮತ್ತಷ್ಟು ಪ್ರಚುರಪಡಿಸಿ ಅವರು ತಯಾರಿಸಿದ ಕರಕುಶಲ ವಸ್ತುಗಳ ಹಾಗೂ ಆಹಾರ ಉತ್ಪನ್ನಗಳಿಗೆ ಸ್ಥಳೀಯವಾಗಿ ಮಾರುಕಟ್ಟೆ ಲಭಿಸುವಂತೆ ಮಾಡಬೇಕು. ಹಾಗಾಗಿ ಮಾಸಿಕ ಸಂತೆ ನಡೆಸಲಾಗುತ್ತಿದೆ. ಮಹಿಳೆಯರೇ ತಯಾರಿಸಿದ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಅವಕಾಶವಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ನೆಮ್ಮಾರ್ ಗ್ರಾಪಂ ಉಪಾಧ್ಯಕ್ಷೆ ವಾಣಿ, ಒಕ್ಕೂಟದ ಉಪಾಧ್ಯಕ್ಷೆ ಸುನೀತಾ, ಕಾರ್ಯದರ್ಶಿ ಮಧುಮತಿ, ಕೋಶಾಧ್ಯಕ್ಷೆ ಭಾಗ್ಯಲಕ್ಷ್ಮೀ, ಜಂಟಿ ಕಾರ್ಯದರ್ಶಿ ನಳಿನಿ, ಪುಟ್ಟಪ್ಪ ಹೆಗಡೆ, ಆದರ್ಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net