ರಾಜ್ಯ ಮಟ್ಟದ ರೈತ ಸಮಾವೇಶದ ಪ್ರಚಾರ

1000251288
Published on

ಹಂಪಾಪುರ: ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಡಿ.23 ರಂದು ಬೆಳಗ್ಗೆ 11ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯ ಶತಮಾನೋತ್ಸವ ಭವನದಲ್ಲಿ ಆಯೋಜಿಸಿರುವ ವಿಶ್ವ ರೈತ ದಿನಾಚರಣೆ, ರಾಜ್ಯ ಮಟ್ಟದ ರೈತ ಸಮಾವೇಶದ ಕುರಿತು ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ, ಕಂಚಮಳ್ಳಿ, ಹೊಮ್ಮರಗಳ್ಳಿ, ಮಾದಾಪುರ, ಹೈರಿಗೆ, ಹ್ಯಾಂಡ್‌ಪೋಸ್ಟ್, ಸರಗೂರು, ತುಂಬಸೋಗೆಯಲ್ಲಿ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಪ್ರಚಾರ ನಡೆಸಲಾಯಿತು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಾಜೇಶ್ ಮಾತನಾಡಿ, ಸರ್ಕಾರ ಎಲ್ಲ ಜಯಂತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಆದರೆ ದೇಶಕ್ಕೆ ಅನ್ನ ನೀಡುವ ರೈತರ ಹಬ್ಬ ಮಾಡುತ್ತಿಲ್ಲ. ಆದ್ದರಿಂದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಡಿ.23ರಂದು ಮೈಸೂರಿನಲ್ಲಿ ವಿಶ್ವ ರೈತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಸೋಮಣ್ಣ ಭಾಗವಹಿಸಲಿದ್ದಾರೆ. ಆದ್ದರಿಂದ ಹೆಚ್ಚಿನ ರೈತರು ಭಾಗವಹಿಸಿ ಯಶಸ್ವಿಗೊಳಿಸಬೇಕು. ಈ ಮೂಲಕ ರೈತರ ಬೇಡಿಕೆ ಈಡೇರಿಸಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒತ್ತಾಯಿಸೋಣ ಎಂದರು.

ರೈತ ಮುಖಂಡರಾದ ಶಂಕರ್, ಕುಮಾರ್, ರಮೇಶ್, ಸುರೇಶ ಶೆಟ್ಟಿ, ಹೇಮಂತ್, ಗಂಗಾಧರ್, ಕೆಂಡಗಣ್ಣ ಸ್ವಾಮಿ, ಸುನಿಲ್ ಮತ್ತು ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net