ಕಣ್ಣಿನ ಸಮಸ್ಯೆಗೆ ಸೂಕ್ತ ಚಿಕಿತ್ಸೆ ಅಗತ್ಯ

24 RTL 02
Published on

ರಟ್ಟಿಹಳ್ಳಿ: ಕಣ್ಣಿನ ಸಮಸ್ಯೆ ಬಗ್ಗೆ ನಿರ್ಲಕ್ಷೃ ವಹಿಸದೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.

ಪಟ್ಟಣದ ಲಯನ್ಸ್ ಕ್ಲಬ್, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ರಾಣೆಬೆನ್ನೂರು, ಶಿಕಾರಿಪುರ ಶಂಕರ ವಿಷನ್ ಸೆಂಟರ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಭಾನುವಾರ ಏರ್ಪಡಿಸಿದ್ದ ಕಣ್ಣಿನ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು. ಶಿಬಿರದಲ್ಲಿ ಒಟ್ಟು 131 ಜನರ ಕಣ್ಣಿನ ತಪಾಸಣೆ ಮಾಡಲಾಗಿದ್ದು, 71 ಜನರನ್ನು ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ ಎಂದರು.

ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಕೆ.ವೈ. ಬಾಜೀರಾಯರ್, ಆರ್.ಬಿ. ಬಳ್ಳೇರ, ನಿಂಗನಗೌಡ ಪ್ಯಾಟಿಗೌಡ್ರು, ಕುಮಾರ ಹರವಿಶೆಟ್ಟರ್, ಹಾಲಪ್ಪ ಮುದಿಗೌಡ್ರು, ಗಣೇಶ ವೇರ್ಣಿಕರ, ಶಂಭಣ್ಣ ಗೂಳಪ್ಪನವರ, ವಿಜಯ ಬುಳ್ಳಾಪುರ, ವೈದ್ಯರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net