ಆಸ್ತಿ ವಿವಾದದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ

Boy Suside+1
Published on

ಹಾನಗಲ್ಲ: ಕೌಟುಂಬಿಕ ಆಸ್ತಿ ವಿವಾದವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಹೊಂದಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಕ್ಕಿವಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಸಿದ್ದಪ್ಪ ಶಿವಪ್ಪ ಯಳ್ಳೂರ (27) ಮೃತ ವ್ಯಕ್ತಿ.

ಈತ ತಮ್ಮ ಕೌಟುಂಬಿಕ ಆಸ್ತಿ ವಿವಾದ ಕುರಿತು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net