ಬಿಡಿಎಯಿಂದ 32 ಕೋಟಿ ಮೌಲ್ಯದ ಸ್ಚತ್ತು ವಶ

bda property
Published on

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಎಚ್‌ಆರ್‌ಬಿಆರ್ ಲೇಔಟ್ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿ ಒಟ್ಟು 32.48 ಕೋಟಿ ರೂ. ಮೌಲ್ಯದ ಎರಡು ಸ್ವತ್ತುಗಳನ್ನು ಮರುವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಬಾಣಸವಾಡಿ ಗ್ರಾಮದ ಸರ್ವೆ ನಂ. 286/2ಕ್ಕೆ ಸೇರಿದ 18 ಗುಂಟೆ ಪ್ರದೇಶದಲ್ಲಿ ಅನಧಿಕೃತ ನಿರ್ಮಾಣ ತಲೆಯೆತ್ತಿತ್ತು. ಇವುಗಳನ್ನು ತೆರವುಗೊಳಿಸಿ ಅಂದಾಜು 25.48 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದೇ ರೀತಿ ಬೆಂಗಳೂರು ಉತ್ತರ ತಾಲೂಕು ಯಶವಂತಪುರ ಹೋಬಳಿಯ ಉಲ್ಲಾಳು ಗ್ರಾಮದ ಸರ್ವೆ ನಂ. 27/1ರಲ್ಲಿನ 6,400 ಚದರ ಅಡಿ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ತೆರವುಗೊಳಿಸಿ, ಸುಮಾರು 7 ಕೋಟಿ ರೂ. ಬೆಲೆ ಬಾಳುವ ಜಾಗವನ್ನು ಪ್ರಾಧಿಕಾರದ ಸುಪರ್ದಿಗೆ ಪಡೆಯಲಾಗಿದೆ. ಈ ಎರಡೂ ಸ್ವತ್ತಿನ ಜಾಗದಲ್ಲಿ ಪ್ರಾಧಿಕಾರದ ಫಲಕ ನೆಟ್ಟು ನಿವೇಶನದ ಸುತ್ತ ತಂತಿಬೇಲಿ ಹಾಕುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯನ್ನು ಪ್ರಾಧಿಕಾರದ ಕಾರ್ಯಪಡೆಯ ಆರಕ್ಷಕ ಅಧೀಕ್ಷಕರ ನೇತೃತ್ವದಲ್ಲಿ ಕೈಗೊಳ್ಳಲಾಯಿತು. ಉತ್ತರ ಹಾಗೂ ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು ಹಾಗೂ ಸ್ಥಳೀಯ ಪೊಲೀಸರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net